ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಹೀರಾನಗರದಲ್ಲಿ ಪಿಐಎ (ಪಾಕಿಸ್ತಾನ ಇಂಟರ್‌ನ್ಯಾಶನಲ್ ಏರ್‌ಲೈನ್ಸ್) ಲಾಂಛನವನ್ನು ಬರೆದಿರುವ ವಿಮಾನದ ಆಕಾರದ ಬಲೂನ್ ಶನಿವಾರ ಪತ್ತೆಯಾಗಿದೆ ಎಂದು ವರದಿಯಾಗಿದೆ.
ವಿಮಾನದಂತೆ ಹೋಲುವ ಕಪ್ಪು ಮತ್ತು ಬಿಳಿ ಬಣ್ಣದ ಬಲೂನ್​ನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ. ಸದ್ಯ ಯಾವ ಭಾಗದಿಂದ ಈ ಬಲೂನ್ ಹಾರಿ ಬಂದಿದೆ ಎಂಬುದರ ಬಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಕಲಿತ ಶಾಲೆಗೆ ಅಧ್ಯಯನ ಪ್ರವಾಸ; ಪ್ರತಿ ಜಿಲ್ಲೆಯಿಂದ 2 ವಿದ್ಯಾರ್ಥಿಗಳಿಗೆ ಅವಕಾಶ!
ಕಳೆದ ಫೆಬ್ರವರಿಯಲ್ಲಿ ಹಸಿರು ಮತ್ತು ಬಿಳಿ ಬಣ್ಣದಿಂದ ಕೂಡಿದ್ದ ವಿಮಾನದ ಆಕಾರದ ಬಲೂನ್ ಶಿಮ್ಲಾದ ಸೇಬಿನ ತೋಟವೊಂದರಲ್ಲಿ ಪತ್ತೆಯಾಗಿತ್ತು. ಇದರಲ್ಲಿ ಪಿಐಎ ಲೋಗೋವನ್ನು ಮುದ್ರಿಸಲಾಗಿತ್ತು.
ಇತ್ತೀಚೆಗೆ ಕೆಲ ತಿಂಗಳುಗಳಿಂದ ಗಡಿ ಭಾಗದಲ್ಲಿ ಪಾಕಿಸ್ತಾನಿ ಡ್ರೋನ್​ಗಳು ಹೆಚ್ಚು ಪತ್ತೆಯಾಗುತ್ತಿರುವುದಾಗಿ ವರದಿಯಾಗಿದೆ. ಮೇ 20 ರಂದು, ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಯೋಧರು ಹೊಡೆದುರುಳಿಸಿದ್ದರು. ಪಂಜಾಬ್‌ನ ಅಂತರರಾಷ್ಟ್ರೀಯ ಗಡಿ(IB)ಯಲ್ಲಿ ಬಿಎಸ್​ಎಫ್ ಯೋಧರು ನಾಲ್ಕು ಪಾಕಿಸ್ತಾನಿ ಡ್ರೋನ್‌ಗಳನ್ನು ವಶಪಡಿಸಿಕೊಂಡಿದ್ದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − fourteen =
Remember me
