ಮುಂಬೈ:ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವುದನ್ನು ತಡೆಯುತ್ತಿದ್ದಾರೆ ಎಂದು ಆರೋಪಿಸಿ ಶಿವಸೇನಾ ಸಂಸದ ಸಂಜಯ್​ ರಾವತ್​ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಾಕಿಸ್ತಾನಿ, ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾಗಳು ಭಾರತವನ್ನು ಪ್ರವೇಶಿಸಬಹುದು ಆದರೆ, ಮಹಾರಾಷ್ಟ್ರದಿಂದ ಯಾರೊಬ್ಬರು ಬೆಳಗಾವಿಗೆ ಹೋಗಬಾರದಾ? ಇದು ತಪ್ಪು. ಅಲ್ಲಿ ವಿವಾದವಿರಬಹುದು ಆದರೆ ಪರಸ್ಪರ ಇಬ್ಬರು ಇಷ್ಟು ನಿರ್ಬಂಧಗಳನ್ನು ಹೇರಬಾರದು ಎಂದು ಹೇಳಿದರು.
ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವುದಕ್ಕೆ ನಿಷೇಧ ಹೇರಿರುವ ದಿನದ ಬೆನ್ನಲ್ಲೇ ಸಂಜಯ್​ ರಾವತ್​ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಗೆ ಸಂಬಂಧಿಸಿದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನರೊಂದಿಗೆ ಮಾತನಾಡಲು ನಾನು ಅಲ್ಲಿಗೆ ಹೋಗಬೇಕಾಗಿದೆ. ಒಂದು ವೇಳೆ ನಿರ್ಬಂಧವೇನಾದರೂ ಹೇರಿದರೆ, ಅದು ಬೇರೆಯದಕ್ಕೆ ಆಸ್ಪದ ನೀಡಿದಂತಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇದಕ್ಕೂ ಮುನ್ನ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ್ ಯೆದ್ರಾವ್​ಕರ್​ ಕರ್ನಾಟಕ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಲ್ಲೆಗೆ ಯತ್ನಿಸಿ, ಮಾತನಾಡುವುದನ್ನು ನಿಲ್ಲಿಸಿದರು ಎಂದು ದೂರಿದ್ದಾರೆ.(ಏಜೆನ್ಸೀಸ್​)
Karnataka: Shiv Sena leader Sanjay Raut arrives at Belgaum Airport.pic.twitter.com/Jp7BkqNqj2— ANI (@ANI)January 18, 2020
Karnataka: Shiv Sena leader Sanjay Raut arrives at Belgaum Airport.pic.twitter.com/Jp7BkqNqj2
Shiv Sena MP Sanjay Raut: Policemen are escorting me and are taking me to an unknown destination from Belgaum Airport.#Karnatakahttps://t.co/hVqLEhHN5r— ANI (@ANI)January 18, 2020
Shiv Sena MP Sanjay Raut: Policemen are escorting me and are taking me to an unknown destination from Belgaum Airport.#Karnatakahttps://t.co/hVqLEhHN5r
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
