ಅಮರಾವತಿ:ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ ಬಳಕೆ ಆರಂಭಿಸಬೇಕು ಎಂದು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಕೂಲಿ ಮಾಡಿ ಕೂಡಿಟ್ಟಿದ್ದ ಹಣಕ್ಕೆ ಕೊಳ್ಳಿ, ಮನೆಯನ್ನು ಸುಟ್ಟಿತ್ತು ಒಲೆಯ ಬೆಂಕಿ…
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವೈಎಸ್​ಆರ್​ಸಿಪಿ ಹೀನಾಯ ಸೋಲು ಅನುಭವಿಸಿದೆ. ಮುಂದುವರಿದ ಪ್ರಜಾಪ್ರಭುತ್ವ ರಾಷ್ಟ್ರಗಳು ಮತಪತ್ರಗಳನ್ನು ಬಳಕೆ ಮಾಡುತ್ತಿವೆ ಎಂದು ಮಾಜಿ ಸಿಎಂ ಜಗನ್ ರೆಡ್ಡಿ ಅವರು ಎಕ್ಸ್​ ಖಾತೆಯಲ್ಲಿ ಬರೆದಿದ್ದಾರೆ.
ಭಾರತದ ಪ್ರಜಾತಂತ್ರ ವ್ಯವಸ್ಥೆಯ ನಿಜವಾದ ಆಶಯವನ್ನು ಎತ್ತಿಹಿಡಿಯಲು ನಾವು ಕೂಡ ಮತಪತ್ರಗಳ ಕಡೆ ಮುಖ ಮಾಡಬೇಕು ಎಂದಿದ್ದಾರೆ. ನ್ಯಾಯದಾನ ಆಗುವುದಷ್ಟೇ ಅಲ್ಲದೆ, ಅದು ಆಗಿದೆ ಎಂಬುದು ಗೊತ್ತಾಗುವಂತೆಯೂ ಇರಬೇಕು ಎಂಬ ಮಾತಿನಂತೆ ಪ್ರಜಾತಂತ್ರವು ಮೇಲುಗೈ ಸಾಧಿಸಿದರಷ್ಟೇ ಸಾಕಾಗುವುದಿಲ್ಲ. ಅದು ಅನುಮಾನಕ್ಕೆ ಆಸ್ಪದವಿಲ್ಲದಂತೆ ಮೇಲುಗೈ ಸಾಧಿಸಿದೆ ಎಂಬುದು ಗೊತ್ತಾಗುವಂತೆಯೂ ಇರಬೇಕು ಎಂದು ಹೇಳಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ವೈಎಸ್​ಆರ್​​ಸಿಪಿ ಪಕ್ಷವು ಕೇವಲ 11 ಸ್ಥಾನಗಳನ್ನು ಗೆದ್ದಿದೆ. ಲೋಕಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳನ್ನು ಪಡೆದಿದೆ.
ಅನುಭವಿ ಮುಖ್ಯಮಂತ್ರಿಗಳು ಆಡಳಿತ ನಡೆಸಲು ಪರದಾಡುತ್ತಿದ್ದಾರೆ: ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
