ಚೆನ್ನೈ:ಖಾಸಗಿ ಶಾಲೆಗಳಿಗೆ ಮಕ್ಕಳ ಪ್ರವೇಶ ಶುಲ್ಕ ಸಂಗ್ರಹಿಸಲು ಅನುಮತಿ ನೀಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಪಾಲಕರು ಹೈಕೋರ್ಟ್​ ಮೊರೆ ಹೋಗಿದ್ದಾರೆ.
ಸರ್ಕಾರೇತರ ಶಾಲಾ – ಕಾಲೇಜುಗಳು ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಆಗಸ್ಟ್​, ಡಿಸೆಂಬರ್​ ಹಾಗೂ 2021ರ ಏಪ್ರಿಲ್​ನಲ್ಲಿ ಒಟ್ಟಾರೆ ಮೂರು ಕಂತುಗಳಲ್ಲಿ ಸಂಗ್ರಹಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು ಸರ್ಕಾರದ ಅಡ್ವೊಕೇಟ್​ ಜನರಲ್​ ಹೈಕೋರ್ಟ್​ಗೆ ತಿಳಿಸಿದ್ದಾರೆ.
ಇದನ್ನೂ ಓದಿ;ನೀಲಿ ಮಸೀದಿಯಾಗುತ್ತಿದೆ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ….!
ಇದು ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಎಸ್​ಇ ನಿಯಮಾವಳಿಗಳ ಅನ್ವಯ ಶುಲ್ಕದ ಶೇ.15 ಮೊತ್ತವನ್ನು ಮೀಸಲು ನಿಧಿಯಾಗಿ ಇರಿಸಿಕೊಳ್ಳಬೇಕು. ಜತೆಗೆ, ಒಟ್ಟು ಶುಲ್ಕದ ಕಾಲುಭಾಗವನ್ನಷ್ಟೇ ಸಂಬಳಕ್ಕೆ ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಹೀಗಾಗಿ ಸಂಬಳಕ್ಕೆ ಅಗತ್ಯವಾದ ಮೊತ್ತವನ್ನಷ್ಟೇ ಪಾಲಕರಿಂದ ಶುಲ್ಕವಾಗಿ ಪಡೆಯಬೇಕೆಂದು ಹೈಕೋರ್ಟ್​ಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ಪಾಲಕರ ಪರ ವಕೀಲರಾದ ಎಂ. ಪುರುಷೋತ್ತಮನ್ ತಿಳಿಸಿದ್ದಾರೆ.
ಇದಲ್ಲದೇ, ಪಾಲಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಪರಿಗಣಿಸುವಂತೆ ಅರ್ಜಿದಾರರು ಕೋರಿದರು.
ಇದನ್ನೂ ಓದಿ;ಪಾಕಿಸ್ತಾನದ ಪೈಲಟ್​ಗಳ ಮೇಲೂ ಅಮೆರಿಕಕ್ಕೆ ಇಲ್ಲ ನಂಬಿಕೆ; ವಿಮಾನ ಸಂಚಾರಕ್ಕಿದ್ದ ಪರವಾನಗಿ ರದ್ದು
ಶುಲ್ಕ ಸಂಗ್ರಹ ವಿಚಾರದಲ್ಲಿ ಸರ್ಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದ್ದರಿಂದ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿತ್ತು. ಅದರ ಜತೆಯಲ್ಲಿಯೇ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೈಕೋರ್ಟ್​ ತಿಳಿಸಿದೆ.
ಒಂದು ಕಾರು ಕೊಂಡರೆ ಮತ್ತೊಂದು ಫ್ರೀ…, ಲಾರಿ ಖರೀದಿಗೆ 13 ಸಾವಿರ ರೂ. ಡೌನ್​ಪೇಮೆಂಟ್​…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 16 =
Remember me
