ಮಹಾರಾಷ್ಟ್ರ:ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಶೂಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಸ್ವಪ್ನಿಲ್ ಕುಸಳೆ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ 1 ಕೋಟಿ ರೂ. ಬಹುಮಾನ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಬಿಹಾರದ ನಳಂದದಲ್ಲಿ ವೈದ್ಯರ ಶವ ಪತ್ತೆ; ಹೊಡೆದು ಕೊಂದ ಹಂತಕರು!
ಪ್ಯಾರಿಸ್ ಒಲಿಂಪಿಕ್ಸ್​ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ಸುತ್ತಿನಲ್ಲಿ ಸ್ವಪ್ನಿಲ್ ಕುಸಳೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮೂರನೇ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರು ಪದಕಗಳು ಒಲಿದಂತಾಗಿದೆ.
ಸ್ವಪ್ನಿಲ್ ಕುಸಳೆ ಅವರ ತಂದೆ ಮತ್ತು ತರಬೇತುದಾರರೊಂದಿಗೆ ಸಿಎಂ ಏಕನಾಥ ಶಿಂದೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಕುಸಳೆ ಅವರಿಗೆ ವಿಡಿಯೋ ಕಾಲ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕುಸಳೆ ಅವರಿಗೆ 1 ಕೋಟಿ ರೂಪಾಯಿ ಬಹುಮಾನ ಮಾಡಲಾಗಿದೆ. ಒಲಿಂಪಿಕ್ಸ್‌ನಿಂದ ಆಗಮಿಸಿದ ಬಳಿಕ ಅವರನ್ನು ಅಭಿನಂದಿಸಲಾಗುವುದು ಎಂದು ಸಿಎಂ ಹೇಳಿದರು.
ಮಹಾರಾಷ್ಟ್ರದ ಕೊಲ್ಹಾಪುರದ ಕುಸಳೆ ಅವರು ಕ್ರೀಡಾ ಲೋಕದಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ರೈಲ್ವೇಯಲ್ಲಿ ಟಿಕೆಟ್​ ಕಲೆಕ್ಟರ್​ ಸ್ವಪ್ನಿಲ್ ಕುಸಳೆ:ಸ್ವಪ್ನಿಲ್ ಕುಸಳೆ, ಟೀಂ ಇಂಡಿಯಾ ಮಾಜಿ ನಾಯಕ, ಕ್ಯಾಪ್ಟನ್ ಕೂಲ್ ಧೋನಿಯ ದೊಡ್ಡ ಅಭಿಮಾನಿ. ವಾಸ್ತವವಾಗಿ ಇನ್ನೊಂದು ಕಾಕತಾಳೀಯ ಸಂಗತಿಯೆಂದರೆ ಧೋನಿ ಕೂಡ ರೈಲ್ವೇಯಲ್ಲಿ ಟಿಸಿ ಆಗಿ ತನ್ನ ವೃತ್ತಿ ಜೀವನ ಆರಂಭಿಸಿದ್ದು, ಕುಸಾಳೆ ಕೂಡ ಸೆಂಟ್ರಲ್ ರೈಲ್ವೇಯಲ್ಲಿ ಟಿಸಿ ಆಗಿ ಸೇವೆ ಸಲ್ಲಿಸಿದ್ದಾರೆ. ಆದಾಗ್ಯೂ, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ಮನು ಭಾಕರ್ ನನಗೆ ಸ್ಫೂರ್ತಿಯಾದರು ಎಂದು ಕುಸಾಳೆ ಹೇಳಿದ್ದಾರೆ.
ತಂದೆ ತೀರಿಕೊಂಡಾಗ ಆದ ನೋವಾಗುತ್ತಿದೆ; ವಯನಾಡ್​ ಸಂತ್ರಸ್ತರ ಭೇಟಿ ಬಳಿಕ ಭಾವುಕರಾದ ರಾಹುಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
