ಪ್ಯಾರಿಸ್​:ಇಂದು (ಆ.06) ನಡೆದ ಜಾವಲಿನ್​ ಸ್ಪರ್ಧೆಯಲ್ಲಿ ಭಾರತದ ಚಿನ್ನದ ಹುಡುಗ, ಚಾಂಪಿಯನ್ ನೀರಜ್ ಚೋಪ್ರಾ ಭಾಗವಹಿಸಿದ್ದು, ಇದೀಗ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀ. ಜಾವಲಿನ್ ಎಸೆದು ನೇರ ಫೈನಲ್​ ಪ್ರವೇಶಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ಕಳೆದ ಬಾರಿ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ದಾಖಲೆ ನಿರ್ಮಿಸಿದ್ದ ನೀರಜ್​, ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಫೈನಲ್ ಪ್ರವೇಶಿಸಿರುವುದು ಭಾರತೀಯರಿಗೆ ಭಾರೀ ಸಂತಸ ಉಂಟುಮಾಡಿದೆ. 2024ರ ಒಲಿಂಪಿಕ್​ ಓಟದಲ್ಲಿಯೂ ಚಿನ್ನ ಗೆದ್ದು ತರುವೆ ಎಂಬ ಭರವಸೆ ನೀಡಿರುವ ನೀರಜ್​ಗೆ ಇದೀಗ ದೇಶವ್ಯಾಪಿ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು ವ್ಯಕ್ತವಾಗುತ್ತಿವೆ.
ಪುರುಷರ ಜಾವಲಿನ್​ ಸ್ಪರ್ಧೆಯಲ್ಲಿ ಭಾಗವಹಿಸಿದ ನೀರಜ್​, ತಮ್ಮ ಮೊದಲನೇ ಪ್ರಯತ್ನದಲ್ಲಿಯೇ 89.34 ಮೀ. ಎಸೆದು ನೇರವಾಗಿ ಫೈನಲ್ ಪ್ರವೇಶಿಸಿರುವುದು ಭಾರತೀಯರಿಗೆ ಐತಿಹಾಸಿಕ ಕ್ಷಣವಾಗಿದೆ. ಆಗಸ್ಟ್​ 08ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕಕ್ಕೆ ಗುರಿಯಿಡಲಿರುವ ನೀರಜ್, ಖಂಡಿತವಾಗಿ ಚಿನ್ನ ಗೆದ್ದು ಬರಲಿದ್ದಾರೆ ಎಂದು ಭಾರತೀಯರು ಆಶಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
