ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನ ಅವಧಿಗೂ ಮುನ್ನವೇ ಮುಗಿಯಲಿದೆಯೇ?– ಹೀಗೊಂದು ಚರ್ಚೆ ಈಗಾಗಲೇ ಶುರುವಾಗಿದ್ದು, ಸಂಸತ್ ಅಧಿವೇಶನವನ್ನು ಮೊಟಕುಗೊಳಿಸಲಿರುವ ಬಗ್ಗೆ ಮಾತುಗಳು ಕೇಳಿಬರಲಾರಂಭಿಸಿವೆ.
ಬಹಳಷ್ಟು ಸಚಿವರು, ಸಂಸದರು ಈಗಾಗಲೇ ಕರೊನಾ ಬಾಧಿತರಾಗಿದ್ದು, ಅಧಿವೇಶನವನ್ನು ಮೊಟಕುಗೊಳಿಸುವ ಬಗ್ಗೆ ರಾಜಕೀಯ ಪಕ್ಷಗಳ ನಡುವೆ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.
ಸೆ. 14ರಂದು ಆರಂಭವಾಗಿರುವ ಅಧಿವೇಶನ ಸದ್ಯದ ವೇಳಾಪಟ್ಟಿ ಪ್ರಕಾರ ಅ. 1ರವರೆಗೂ ನಡೆಯಲಿದೆ. ಆದರೆ ಹಿರಿಯ ಮುಖಂಡರಾದ ಅಮಿತ್​ ಷಾ, ನಿತಿನ್ ಗಡ್ಕರಿ ಅವರನ್ನೊಳಗೊಂಡಂತೆ ಸುಮಾರು 30 ಸಚಿವರು-ಸಂಸದರು ಸೋಂಕಿಗೆ ಒಳಗಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಅಂದುಕೊಂಡಿದ್ದ ಸಮಯಕ್ಕೂ ಮೊದಲೇ ಅಧಿವೇಶನ ಮುಗಿಸಲಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂಬ ಮಾಹಿತಿ ಸಂಸತ್ ಅಂಗಳದಲ್ಲಿ ಹರಿದಾಡುತ್ತಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
