ನವದೆಹಲಿ:ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ಹೊಸ ಸಂಸತ್​​ನಲ್ಲಿ ನಡೆದ ಕಲಾಪದ ಮೊದಲ ದಿನವಾದ ಇಂದು ಮಹಿಳಾ ಮೀಸಲಾತಿ ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಮಸೂದೆ ಮಂಡಿಸಿದರು.
ಹೊಸ ಸಂಸತ್ ಭವನದಲ್ಲಿ ಮೊದಲ ಭಾಷಣದಲ್ಲಿ ಪ್ರಧಾನಿ ಮೋದಿ, ಮಹಿಳಾ ಮೀಸಲಾತಿ ಮಸೂದೆಯನ್ನು ಘೋಷಿಸಿದರು. ನಾರಿಶಕ್ತಿ ವಂದನ್ ಅಧಿನಿಯಂ ಅನ್ನು ಪರಿಚಯಿಸುವ ಸಂದರ್ಭದಲ್ಲಿ ಪ್ರಧಾನಿಯವರು ಎಲ್ಲಾ ಶಾಸಕರಲ್ಲಿ ಒಮ್ಮತವನ್ನು ಕೇಳಿದರು. ಹಿಂದಿನ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಅವರಿಗೆ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗಲಿಲ್ಲ. ವರ್ಷಗಳ ಕಾಲ ಮಹಿಳಾ ಮೀಸಲಾತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ನಾವು ಇತಿಹಾಸವನ್ನು ಸೃಷ್ಟಿಸಿದ್ದೇವೆ. ‘ನಾರಿ ಶಕ್ತಿ ವಂದನ್ ಅಧಿನಿಯಮ್’ ಹೆಚ್ಚಿನ ಮಹಿಳೆಯರು ಸಂಸತ್, ವಿಧಾನಸಭೆಗಳ ಸದಸ್ಯರಾಗುವುದನ್ನು ಖಚಿತಪಡಿಸುತ್ತದೆ. ಲೋಕಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಒದಗಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ
ಕಳೆದ 27 ವರ್ಷಗಳಲ್ಲಿ ಹಲವಾರು ಬಾರಿ ಮಸೂದೆಯನ್ನು ಮಂಡಿಸಲಾಗಿದೆ ಆದರೆ ಪದೇ ಪದೇ ಅದಕ್ಕೆ ತಡೆಯೊಡ್ಡಲಾಗಿತ್ತು. ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಹೆಚ್ಚು ಹೆಚ್ಚು ಮಹಿಳೆಯರು ಸೇರಬೇಕೆಂದು ನಾವು ಬಯಸುತ್ತೇವೆ. ಜೀವನದ ವಿವಿಧ ಆಯಾಮಗಳಲ್ಲಿ ಭಾರತೀಯ ಮಹಿಳೆಯರು ನೀಡಿದ ಕೊಡುಗೆಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಹೊಸ ಸದನಕ್ಕೆ ನಾವು ಪಾದಾರ್ಪಣೆ ಮಾಡುತ್ತಿದ್ದೇವೆ. ಈ ಹಳೇ ಸಂಸತ್ ಭವನನ್ನು ಸಂವಿಧಾನ ಸದನ ಎಂಬ ಹೆಸರಿನೊಂದಿಗೆ ಕರೆಯಲು ಇಚ್ಚಿಸುತ್ತೇನೆ. ಇದಕ್ಕೆ ನಿಮ್ಮ ಒಪ್ಪಿಗೆ ಇದ್ದರೆ ಸಹಮತಿ ಸೂಚಿಸಬೇಕು ಎಂದು ಮೋದಿ ಹೇಳಿದ್ದಾರೆ. ಈ ಮೂಲಕ ಹೊಸ ಪೀಳಿಗೆಗೆ ಈ ಸಂಸತ್ ಭವನ ಕಟ್ಟದ ಇತಿಹಾಸ ತಿಳಿಯಲು ನೆರವಾಗಬೇಕು ಎಂದು ಮೋದಿ ಹೇಳಿದ್ದಾರೆ.
India First Transgender OPD; ತೃತೀಯಲಿಂಗಿಗಳಿಗಾಗಿ ಈ ಆಸ್ಪತ್ರೆಯಲ್ಲಿ ಶುರುವಾಯ್ತು ವಿಶೇಷ ಒಪಿಡಿ ಸೇವೆ…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:three × four =
Remember me
