ನವದೆಹಲಿ:ಪ್ರಯಾಣಿಕ ಓರ್ವ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಘಟನೆ ಗೋವಾ-ದೆಹಲಿ ನಡುವಿನ ಏರ್​ ಇಂಡಿಯಾ ವಿಮಾನದಲ್ಲಿ ನಡೆದಿದೆ.
ಏರ್​ ಇಂಡಿಯಾ ವಿಮಾನ ಸಂಖ್ಯೆ AI882ರಲ್ಲಿ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಆರೋಪಿಯನ್ನು ದೆಹಲಿಯಲ್ಲಿ ಪೊಲೀಸ್​ ವಶಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
ಇದನ್ನೂ ಓದಿ:ಲೈಕ್ಸ್​, ವ್ಯೂವ್ಸ್​​ಗಾಗಿ ಟ್ರಾಫಿಕ್​ ಸಿಗ್ನಲ್​ನಲ್ಲಿ ಸ್ನಾನ ಮಾಡಿದ ಯುವಕ!
ಈ ಕುರಿತು ಪ್ರತಿಕ್ರಿಯಿಸಿರುವ ಏರ್​ ಇಂಡಿಯಾ ವಕ್ತಾರರು AI882ನಲ್ಲಿ ಮೇ 29ರಂದು ಪ್ರಯಾಣಿಕನೊಬ್ಬನು ಮೊದಲಿಗೆ ಅನುಚಿತವಾಗಿ ವರ್ತಿಸಲು ಶುರು ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಳಿಕ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.
ದೆಹಲಿಯ್ಲಲಿ ವಿಮಾನ ಲ್ಯಾಂಡ್​ ಆದ ನಂತರವೂ ಪ್ರಯಾಣಿಕ ಅನುಚಿತವಾಗಿ ವರ್ತಿಸುವುದನ್ನು ಮುಂದುವರೆಸಿದ. ಈ ಬಗ್ಗೆ ನಾವು ವಿಮಾನ ನಿಲ್ದಾಣದ ನಿಯಂತ್ರಕರಿಗೆ ದೂರು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದೇವೆ ಎಂದು ಏರ್​ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + three =
Remember me
