ಇಂದೋರ್:ಶನಿವಾರ ಸಂಜೆ 60 ವರ್ಷದ ಪ್ರಯಾಣಿಕರೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮಧುರೈನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದ ನಂತರ, ಮಹಿಳೆಯನದನ್ನು ವಿಮಾನ ನಿಲ್ದಾಣದ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.
“ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ (60) ಅವರ ಬಾಯಿಯಿಂದ ಆರೋಗ್ಯ ಸಮಸ್ಯೆಯ ಕಾರಣ ರಕ್ತಸ್ರಾವವಾಗಿದೆ. ಪ್ರಯಾಣದ ಮಧ್ಯದಲ್ಲಿ ಅವರ ಸ್ಥಿತಿ ಹದಗೆಟ್ಟಿದ್ದು ಇಂದೋರ್​ನಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಲಾಯಿತು” ಎಂದು ವಿಮಾನ ನಿಲ್ದಾಣದ ಪ್ರಭಾರಿ ನಿರ್ದೇಶಕ ಪ್ರಬೋಧ್ ಚಂದ್ರ ಶರ್ಮಾ ಹೇಳಿದ್ದಾರೆ.
ಗುಪ್ತಾರನ್ನು ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಕರೆದೊಯ್ದ ವೈದ್ಯರ ಪ್ರಕಾರ, ಅವರು ಈಗಾಗಲೇ ಹೃದ್ರೋಗ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಮೃತ ಗುಪ್ತಾ ನೋಯ್ಡಾ ನಿವಾಸಿ. ಮರಣೋತ್ತರ ಪರೀಕ್ಷೆಯ ನಂತರ ಅವರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.(ಏಜೆನ್ಸೀಸ್​)
ಚಾಕುವಿನೊಂದಿಗೆ ಕೆಳಗಿಳಿದ ಕಳ್ಳ ನಾಲ್ಕು ಕಿ.ಮೀ ಓಡಿ ಪರಾರಿ ಆದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 18 =
Remember me
