ಹೊಸದಿಲ್ಲಿ:ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಏರ್​ಲೈನ್​ ಸಿಬ್ಬಂದಿ ಮುಖಕ್ಕೆ ಗುದ್ದಿದ ಘಟನೆಯ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ವಿಮಾನದ ಟೈಮಿಂಗ್ಸ್​ನಲ್ಲಿ ವಿಳಂಬವಾಗಲಿದೆ ಎಂದು ಹೇಳಿದ್ದಕ್ಕೆ ಇಷ್ಟೆಲ್ಲಾ ಅವಾಂತರ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:Gold, Silver Price; ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ…ಈ ಶುಭದಿನದಂದು ಗೋಲ್ಡ್​ ರೇಟ್​ ಎಷ್ಟಿದೆ ನೋಡಿ..
ಈ ವಿಡಿಯೋಗೆ ಸಂಬಂಧಿಸಿದಂತೆ ಸದ್ಯ ಪೊಲೀಸರು ದೂರು ಸ್ವೀಕರಿಸಿದ್ದು, ಎಫ್‌ಐಆರ್ ಕೂಡ ದಾಖಲಿಸಿಕೊಂಡಿದ್ದಾರೆ. ವೀಡಿಯೋ ಪ್ರಕಾರ, ಏರ್​ಲೈನ್​ ಸಿಬ್ಬಂದಿ ವಿಮಾನ ವಿಳಂಬವಾಗಲಿದೆ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಹಳದಿ ಬಟ್ಟೆ ಧರಿಸಿದ್ದ ಪ್ರಯಾಣಿಕರೊಬ್ಬರು ತಾವು ಕುಳಿತ ಸ್ಥಳದಿಂದ ಎದ್ದು ಬಂದು ಸಿಬ್ಬಂದಿ ಮುಖಕ್ಕೆ ಗುದ್ದಿರುವುದು ದೃಶ್ಯದಲ್ಲಿ ಕಂಡುಬಂದಿದೆ.
A passenger of an#IndigoFlight, punched the captain who was making delay announcement. The Flight had already been delayed for almost 13 hours.pic.twitter.com/VovmAydnDt
— Amitabh Chaudhary (@MithilaWaala)January 15, 2024

ಸಿಬ್ಬಂದಿಗೆ ಥಳಿಸಲು ಬಂದ ಪ್ರಯಾಣಿಕನನ್ನು ಪಕ್ಕದಲ್ಲೇ ನಿಂತಿದ್ದ ಫ್ಲೈಟ್ ಅಟೆಂಡೆಂಟ್ ತಕ್ಷಣವೇ ತಡೆಯುವ ಮೂಲಕ ಸಿಬ್ಬಂದಿಯ ರಕ್ಷಣೆಗೆ ಮುಂದಾಗಿದ್ದಾರೆ. ಘಟನೆಗೆ ಕೆಲವು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದರೆ, ಇನ್ನು ಕೆಲವರು ವಿಮಾನ ವಿಳಂಬಕ್ಕೆ ಇಂಡಿಗೋ ಸಂಸ್ಥೆಯನ್ನು ದೂಷಿಸಿದ್ದಾರೆ.
ಇದನ್ನೂ ಓದಿ:ಸದಾಶಿವ ವರದಿ ಸರ್ಕಾರಕ್ಕೆ ಬೇಗುದಿ: ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಹಲವು ಸಮುದಾಯಗಳ ಬಿಗಿಪಟ್ಟು
ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ನೆಟ್ಟಿಗರು ಪ್ರಯಾಣಿಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ,(ಏಜೆನ್ಸೀಸ್).
ಮೂರನೇ ದಿನಕ್ಕೆ ಕಾಲಿಟ್ಟ ಮಹೇಶ್ ಬಾಬು ಚಿತ್ರ! ಎಷ್ಟು ಕೋಟಿ ಕಲೆಕ್ಷನ್? ಇಲ್ಲಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
