ನವದೆಹಲಿ:ಜಪಾನ್​ನ ಸಮುದ್ರದಲ್ಲಿ ತಡೆಹಿಡಿಯಲ್ಪಟ್ಟಿರುವ ಡೈಮಂಡ್ ಪ್ರಿನ್ಸಸ್ ಹಡಗಿನಲ್ಲಿ ಕರೊನಾ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದ ನಂತರ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು, ಹಡಗಿನಲ್ಲಿರುವ ಆರೋಗ್ಯವಂತರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್ ತೋರಿಸಿದ 11 ಜನರ ಮೊದಲ ತಂಡವನ್ನು ಹಡಗಿನಿಂದ ಶುಕ್ರವಾರ ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಡೈಮಂಡ್ ಪ್ರಿನ್ಸಸ್​ನಲ್ಲಿರುವ ಭಾರತೀಯರ ಪೈಕಿ ಮತ್ತೊಬ್ಬರಿಗೆ ಶುಕ್ರವಾರ ಸೋಂಕು ಇರುವುದು ಧೃಢಪಟ್ಟಿದ್ದು, ಸೋಂಕುಪೀಡಿತ ಭಾರತೀಯರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ ಎಂದು ಜಪಾನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ 218ಕ್ಕೆ ಏರಿದೆ. ಹಡಗಿನಲ್ಲಿ 3,711 ಜನರಿದ್ದು, 138 ಭಾರತೀಯರಿದ್ದಾರೆ.
ಮೃತರ ಸಂಖ್ಯೆ 1400ಕ್ಕೆ ಏರಿಕೆ:ಚೀನಾದಲ್ಲಿ ಕರೊನಾ ವೈರಸ್​ಗೆ ಶುಕ್ರವಾರ ಮತ್ತೆ 121 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,400 ಗಡಿ ಸಮೀಪಿಸಿದೆ. ಜತೆಗೆ 5,090 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 63,851 ತಲುಪಿದೆ.
ಡಿಜಿಸಿಎ ಸೂಚನೆ: ಕರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಜಪಾನ್ ಮತ್ತು ದಕ್ಷಿಣ ಕೊರಿಯಾದಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಏರೋಬ್ರಿಡ್ಜ್ ನಿಂದ ಹೊರಬಂದ ತಕ್ಷಣ ಕಡ್ಡಾಯವಾಗಿ ಸ್ಕ್ರೀನಿಂಗ್ ಮೂಲಕ ತಪಾಸಣೆಗೊಳಪಡಿಸಬೇಕು ಎಂದು ಭಾರತೀಯ ನಾಗರಿಕ ವಿಮಾನಯಾನ ಮಾಹನಿರ್ದೇಶನಾಲಯ (ಡಿಜಿಸಿಎ) ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
