ಥಾಣೆ:ರೈಲು ಹತ್ತುವ ವೇಳೆ ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕ ತಿರುಗಿ ಕೈ ಕೈ ಮಿಲಾಯಿಸಿರುವ ಘಟನೆ ಥಾಣೆಯ ದಿವಾ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ದಿವಾದಿಂದ ಕರ್ಜಾತ್​​ ಕಡೆಗೆ ಹೋಗುವ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರು ಹೆಚ್ಚಿನ ಜನಸಂದಣಿ ಇದ್ದ ಕಾರಣ ರೈಲನ್ನು ಹತ್ತಲು ಸಾಧ್ಯವಾಗಿಲ್ಲ. ಈ ವೇಳೆ ಪುಟ್​ಬೋರ್ಡ್​​ನಲ್ಲಿ ನಿಂತಿದ್ದವರ ಜೊತೆ ಜಗಳವಾಡಿರುವ ಪ್ರಯಾಣಿಕರು ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಪ್ರಯಾಣಿಕರು ಪುಟ್​ಬೋರ್ಡ್​​ನಲ್ಲಿ ನಿಂತಿದವರನ್ನು ಹಿಡಿದು ಥಳಿಸುತ್ತಿರುವುದು ಕಂಡು ಬರುತ್ತದೆ.
#Mumbai#Mumbailocal2 pax block pathway for commuters at#Divastation. Angry crowd charges at them@Central_Railway🎥@Yourskamalk@fpjindiapic.twitter.com/vEP7GaAsKu
ಇದನ್ನೂ ಓದಿ:ರಾಮನವಮಿ ವೇಳೆ ಘರ್ಷಣೆ; ಹನುಮ ಜಯಂತಿಗೆ ಕಟ್ಟೆಚ್ಚೆರ ವಹಿಸುವಂತೆ ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಸೋಮವಾರ ಸಂಜೆ ಘಟನೆ ನಡೆದಿದ್ದು ದೂರನ್ನು ದಾಖಲಿಸಿಕೊಳ್ಳಲು ಹಲ್ಲೆಗೊಳಗಾದವರನ್ನು ಹುಡುಕಲಾಗುತ್ತಿದೆ. ವಿಷಯ ತಿಳಿದು ಪೊಲೀಸ್​ ಅಧಿಕಾರಿಗಳು ಸ್ಥಳಕ್ಕೆ ತಲುಪುವ ವೇಳೆಗೆ ಹಲ್ಲೆಗೊಳಗಾದ ಪ್ರಯಾಣಿಕರು ಸ್ಥಳದಲ್ಲಿರಲಿಲ್ಲ. ಅವರ ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಈ ರೀತಿಯ ಘಟನೆಗಳು ಸಬ್​ ಅರ್ಬನ್​ ರೈಲಿನಲ್ಲಿ ಸಾಮಾನ್ಯವಾಗಿದ್ದು ಹತ್ತುವ-ಇಳಿಯುವ ಬಗ್ಗೆ ಪ್ರಯಾಣಿಕರ ನಡುವೆ ಗಲಾಟೆಯಾಗುತ್ತಿರುತ್ತದೆ. ಇತ್ತೀಚಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ರೈಲ್ವೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eight =
Remember me
