ನವದೆಹಲಿ:ಪಠಾಣ್​ಕೋಟ್​ ದಾಳಿಯ ಮಾಸ್ಟರ್​ ಮೈಂಡ್​ ಮತ್ತು ಭಾರತದ ಮೋಸ್ಟ್​ ವಾಂಟೆಡ್​ ಉಗ್ರ ಶಾಹಿದ್​ ಲತೀಫ್​ನನ್ನು ಅಪರಿಚಿತ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ಬುಧವಾರ ನಡೆದಿದೆ.
41 ವರ್ಷದ ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಪ್ರಮುಖ ಸದಸ್ಯನಾಗಿದ್ದ. 2016ರ ಜನವರಿ 2ರಂದು ನಡೆದ ಪಠಾಣ್​ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದ. ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿ, ಅದನ್ನು ಕಾರ್ಯಗತಗೊಳಿಸಲು ನಾಲ್ವರು ಜೆಇಎಂ ಭಯೋತ್ಪಾದಕರನ್ನು ಪಠಾಣ್‌ಕೋಟ್‌ಗೆ ಕಳುಹಿಸಿದ್ದ.
ಇದನ್ನೂ ಓದಿ:ಮಿನಿ ದಸರಾದಂತೆ ನಡೆದ ಗಣಪತಿ ವಿಸರ್ಜನೆ: ಬಸರಾಳು ಗ್ರಾಮದಲ್ಲಿ ಅದ್ದೂರಿ ಕಾರ್ಯಕ್ರಮ
ಕಾನೂನುಬಾಹಿರ (ಚಟುವಟಿಕೆಗಳು) ಕಾಯಿದೆ (ಯುಎಪಿಎ)ಯ ಅಡಿಯಲ್ಲಿ ಭಯೋತ್ಪಾದನೆಯ ಆರೋಪದ ಮೇಲೆ 1994ರ ನವೆಂಬರ್ 12ರಂದು ಲತೀಫ್​ನನ್ನು ಭಾರತದಲ್ಲಿ ಬಂಧಿಸಲಾಯಿತು ಮತ್ತು ವಿಚಾರಣೆಗೆ ಒಳಪಡಿಸಿ, ಅಂತಿಮವಾಗಿ ಜೈಲಿಗೆ ಹಾಕಲಾಯಿತು. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ನಂತರ 2010ರಲ್ಲಿ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗಿತ್ತು.
1999ರಲ್ಲಿ ಇಂಡಿಯನ್ ಏರ್ ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಲತೀಫ್ ಆರೋಪಿಯಾಗಿದ್ದ. 2010 ರಲ್ಲಿ ಬಿಡುಗಡೆಯಾದ ನಂತರ ಲತೀಫ್ ಪಾಕಿಸ್ತಾನದ ಜಿಹಾದಿ ಕಾರ್ಖಾನೆಗೆ ಹಿಂತಿರುಗಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯ ತನಿಖೆ ಹೇಳುತ್ತದೆ. ಭಾರತ ಸರ್ಕಾರದಿಂದ ಆತನನ್ನು ಮೋಸ್ಟ್​ ವಾಂಟೆಡ್ ಭಯೋತ್ಪಾದಕ ಎಂದು ಪಟ್ಟಿ ಮಾಡಲಾಗಿತ್ತು.(ಏಜೆನ್ಸೀಸ್​)
ಯುದ್ಧ ಪೀಡಿತ ಇಸ್ರೇಲ್​ನಲ್ಲಿ ಸಿಲುಕಿದ ಮೈಸೂರಿನ ಕುಟುಂಬ: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

ಅಬ್ಬಾ ಸಚಿನ್​ ಸೆಂಚುರಿ ಬಾರಿಸಲಿಲ್ಲ! 2011ರ ವಿಶ್ವಕಪ್​ನ ಪಾಕ್​ ಪಂದ್ಯ​ ನೆನೆದು ದೇವರಿಗೆ ಥ್ಯಾಂಕ್ಸ್​ ಎಂದ ಸೆಹ್ವಾಗ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × three =
Remember me
