ನವದೆಹಲಿ:ಏಮ್ಸ್​ ಆಸ್ಪತ್ರೆಯಲ್ಲಿ ಇತ್ತೀಚೆಗೆ ಪದೇಪದೆ ಆತ್ಮಹತ್ಯೆಗಳು ನಡೆಯುತ್ತಿವೆ. ಸ್ವಲ್ಪ ದಿನಗಳ ಹಿಂದೆ ಪತ್ರಕರ್ತನೋರ್ವ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಅದಾದ ಬಳಿಕ ಏಮ್ಸ್​ನ ಮನಃಶಾಸ್ತ್ರ ವಿಭಾಗದಲ್ಲಿ ಟ್ರೇನಿಂಗ್ ಪಡೆಯುತ್ತಿದ್ದ ಕಿರಿಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದೀಗ ಮತ್ತೋರ್ವ ರೋಗಿ ಏಮ್ಸ್​ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವರದಿಯಾಗಿದೆ. ಮೃತ ರೋಗಿಯನ್ನು ರಾಜಮಣಿ ಸತ್ತರ್​ ಎಂದು ಗುರುತಿಸಲಾಗಿದ್ದು, ಇವರು ಸ್ನಾನದ ಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದನ್ನೂ ಓದಿ:8 ವರ್ಷದಲ್ಲಿ ಕಟ್ಟಿದ ಸೇತುವೆ ಒಂದು ತಿಂಗಳೂ ಉಳಿಯಲಿಲ್ಲ; ಕುಸಿದುಬಿದ್ದ ಬೆನ್ನಲ್ಲೇ ಸಿಎಂ ವಿರುದ್ಧ ಆಕ್ರೋಶ
ಈ ರೋಗಿ ತುಂಬ ದಿನಗಳಿಂದಲೂ ಚಿಕಿತ್ಸೆ ಪಡೆಯುತ್ತಿದ್ದರು. ಸ್ವಲ್ಪ ಖಿನ್ನತೆಗೆ ಒಳಗಾಗಿದ್ದರು. ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ, ಯಾವುದೇ ಸೂಸೈಡ್​ ನೋಟ್​ ಕೂಡ ಸಿಕ್ಕಿಲ್ಲ.ಇಂದು ಮುಂಜಾನೆ ವಾರ್ಡ್​ಗೆ ಬಂದ ಆಸ್ಪತ್ರೆ ಸಿಬ್ಬಂದಿಗೆ ಈತ ನೇಣು ಬಿಗಿದುಕೊಂಡಿದ್ದು ಗೊತ್ತಾಗಿದೆ. ಪೊಲೀಸರು ಆಸ್ಪತ್ರೆ ಸಿಬ್ಬಂದಿ, ರೋಗಿಯ ಸಂಬಂಧಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. (ಏಜೆನ್ಸೀಸ್​)
200 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು; 5 ಮಂದಿ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
