ಪಾಟ್ನಾ:ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾದ ಬೆನ್ನಲ್ಲೇ ಪಾಟ್ನಾದ ಬಿಜೆಪಿ ಮಹಿಳಾ ಕಾರ್ಯಕರ್ತರು ಹೋಳಿ ಆಡುವ ಮುಖೇನ ಸಂಭ್ರಮಿಸಿದ್ದಾರೆ.
ಇದನ್ನೂ ಓದಿ:ಅನಂತ್‌ನಾಗ್‌ನಲ್ಲಿ ಏಳನೇ ದಿನಕ್ಕೆ ಎನ್‌ಕೌಂಟರ್ ಅಂತ್ಯ; ಲಷ್ಕರ್ ಕಮಾಂಡರ್ ಉಜೈರ್ ಖಾನ್ ಸೇರಿದಂತೆ ಇಬ್ಬರು ಭಯೋತ್ಪಾದಕರ ಹತ್ಯೆ
ಇಂದು ದೆಹಲಿಯ ನೂತನ ಸಂಸತ್​ ಭವನದಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ಇದನ್ನು ‘ನಾರಿ ಶಕ್ತಿ ವಂದನ್ ಅಧಿನಿಯಮ್’ ಎಂದು ಕರೆಯಲಾಗುತ್ತದೆ. ಇದು ಅಧಿಕ ಸಂಖ್ಯೆಯ ಮಹಿಳೆಯರು ಸಂಸತ್, ವಿಧಾನಸಭೆಗಳ ಸದಸ್ಯರಾಗುವುದನ್ನು ಖಚಿತಪಡಿಸುತ್ತದೆ” ಎಂದು ಹೇಳಿದರು.
ಇದನ್ನೂ ಓದಿ:ಮಹಿಳಾ ಮೀಸಲಾತಿ ಮಸೂದೆ; ಇದನ್ನು ಜಾರಿಗೊಳಿಸಲು ದೇವರು ನನ್ನನ್ನು ಆಯ್ಕೆ ಮಾಡಿದ್ದಾರೆ: ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಪ್ರಧಾನಿ, “ಇದನ್ನು ಜಾರಿಗೊಳಿಸಲು ದೇವರು ನನ್ನನ್ನು ಆಯ್ಕೆ ಮಾಡಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವಾರು ಬಾರಿ ಮಂಡಿಸಲಾಗಿತ್ತು. ಆದ್ರೆ, ಹಲವು ಬಾರಿ ಇದಕ್ಕೆ ತಡೆ ಎದುರಾಗಿತ್ತು. ಮಸೂದೆಯನ್ನು ಅಂಗೀಕರಿಸಲು ಸಾಕಷ್ಟು ಬಹುಮತ ಇರಲಿಲ್ಲ ಮತ್ತು ಹಲವು ಕಾರಣಗಳಿಂದ ಈ ಕನಸು ಅಪೂರ್ಣವಾಗಿತ್ತು. ಆದ್ರೆ, ಇಂದು ದೇವರೇ ಇದನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ನೀಡಿದ್ದಾರೆ” ಎಂದು ಹೇಳಿದರು.
VIDEO | Women BJP workers in Patna play Holi as they celebrate after tabling of Women’s Reservation Bill in the Lok Sabha.pic.twitter.com/cNOEBJUfa7
— Press Trust of India (@PTI_News)September 19, 2023

ಪ್ರಧಾನಿ ನರೇಂದ್ರ ಮೋದಿ ಇಂದು ಹೊಸ ಸಂಸತ್​ನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಬೆನ್ನಲ್ಲೇ ಹಲವೆಡೆ ಸಂಭ್ರಮ ಆರಂಭಗೊಂಡಿದ್ದು, ಪಾಟ್ನಾ ಬಿಜೆಪಿ ಮಹಿಳಾ ಕಾರ್ಯಕರ್ತರು ಪರಸ್ಪರ ಹೋಳಿ ಆಡುವ ಮುಖೇನ ಸಂಭ್ರಮಿಸಿದ ದೃಶ್ಯ ಇದೀಗ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಹರಿದಾಡಿದೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
