ನವದೆಹಲಿ:ನಿರ್ಭಯಾ ಅತ್ಯಾಚಾರ ಅಪರಾಧಿಗಳಲ್ಲಿ ಓರ್ವನಾದ ಪವನ್​ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಇಂದು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತಿರಸ್ಕರಿಸಿದ್ದಾರೆ.
ನಿರ್ಭಯಾ ಅತ್ಯಾಚಾರ ಅಪರಾಧಿಗಳು ಕಾನೂನು ಪ್ರಕ್ರಿಯೆಗಳನ್ನು ಮುಂದಿಟ್ಟುಕೊಂಡು ತಮಗೆ ವಿಧಿಸಲಾದ ಮರಣದಂಡನೆಯನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ದೆಹಲಿ ಕೋರ್ಟ್​ನ ಹಿಂದಿನ ಆದೇಶ ಸರಿಯಾಗಿ ಜಾರಿಯಾಗಿದ್ದರೆ ನಿನ್ನೆ (ಮಾ.3) ಮುಂಜಾನೆ 6ಗಂಟೆಗೆಲ್ಲ ನಾಲ್ವರೂ ಅಪರಾಧಿಗಳು ಗಲ್ಲಿಗೇರಬೇಕಿತ್ತು. ಆದರೆ ಮಾರ್ಚ್​ 2ರಂದು ದೆಹಲಿ ಪಟಿಯಾಲಾ ಕೋರ್ಟ್​ ಅಪರಾಧಿಗಳನ್ನು ಗಲ್ಲಿಗೇರಿಸಲು ತಡೆ ನೀಡಿತ್ತು.
ಅಪರಾಧಿ ಪವನ್​​ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್​ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್​ ತಿರಸ್ಕರಿಸಿತ್ತು. ಅದರ ಬೆನ್ನಲ್ಲೇ ಆತ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಕ್ಷಮೆ ಕೋರಿ ಅರ್ಜಿ ಸಲ್ಲಿಸಿದ್ದ. ತಾನು ರಾಷ್ಟ್ರಪತಿಯವರಿಗೆ ದಯಾ ಅರ್ಜಿ ಸಲ್ಲಿಸಿದ್ದು, ಅದು ಇತ್ಯರ್ಥ ಆಗುವವರೆಗೆ ಗಲ್ಲು ಶಿಕ್ಷೆಯನ್ನು ಮುಂದೂಡಬೇಕು ಎಂದು ದೆಹಲಿ ಪಟಿಯಾಲಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಇದರ ವಿಚಾರಣೆ ನಡೆಸುವ ಕಾರಣಕ್ಕೆ ಮಂಗಳವಾರ (ಮಾ.3ರಂದು)ನೇಣಿಗೇರಬೇಕಿದ್ದ ಅಪರಾಧಿಗಳ ಶಿಕ್ಷೆಯನ್ನು ಕೋರ್ಟ್ ಮುಂದೂಡಿತ್ತು.
ಉಳಿದ ಮೂವರು ಅಪರಾಧಿಗಳಾದ ವಿನಯ್​, ಮುಕೇಶ್​, ಅಕ್ಷಯ್​ ಸಲ್ಲಿಸಿದ್ದ ದಯಾ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಈಗಾಗಲೇ ತಿರಸ್ಕರಿಸಿದ್ದಾರೆ. ಇನ್ನು ಹೊಸ ಡೆತ್​ ವಾರೆಂಟ್ ಜಾರಿಯಾದ ಬಳಿಕವಷ್ಟೇ ಅಪರಾಧಿಗಳನ್ನು ಗಲ್ಲಿಗೇರಿಸಲು ಸಾಧ್ಯ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
