ಹೈದರಾಬಾದ್​​:ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನದ ಬಳಿಕ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್‌ರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.
ಮಂಗಳಗಿರಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು ಪಿಎಸಿ ಸಭೆಯಲ್ಲಿ ಭಾಗವಹಿಸಲು ಬರುತ್ತಿದ್ದ ಜನಸೇನಾ ನಾಯಕ ಪವನ್ ಕಲ್ಯಾಣ್ ಅವರನ್ನು ಪೊಲೀಸರು ತಡರಾತ್ರಿ ವಶಕ್ಕೆ ಪಡೆದರು. ಚಂದ್ರಬಾಬು ಬಂಧನದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಸಮಸ್ಯೆ ಉಂಟಾಗಲಿದೆ ಎಂದು ಮನವಿ ಮಾಡಿದರೂ ಕೇಳದ ಹಿನ್ನೆಲೆಯಲ್ಲಿ ಸಭೆ ಏರ್ಪಡಿಸಿದ್ದಕ್ಕೆ ಜಗ್ಗಯ್ಯಪೇಟೆ ಪೊಲೀಸರು ಪವನ್ ಕಲ್ಯಾಣ್‌ರನ್ನು ವಶಕ್ಕೆ ಪಡೆದಿದ್ದಾರೆ.
ಬಂಧನದ ಬಳಿಕ ತಡರಾತ್ರಿ ಹೈಡ್ರಾಮಾ ಶುರುವಾಗಿದ್ದು, ಆ ನಂತರ ಅವರನ್ನು ಬಿಡುಗಡೆ ಮಾಡಿ ಪವನ್ ಕಲ್ಯಾಣ್ ವಿಜಯವಾಡಕ್ಕೆ ಹೋಗಲು ಪೊಲೀಸರು ಅನುಮತಿ ನೀಡಿದರು. ವಿಜಯವಾಡ-ಹೈದರಾಬಾದ್ ಹೆದ್ದಾರಿಯಲ್ಲಿ ಪ್ರತಿ ಚೆಕ್‌ಪೋಸ್ಟ್‌ನಲ್ಲೂ ಪವನ್‌ರನ್ನು ತಡೆದಿದ್ದರಿಂದ ತೀವ್ರ ಉದ್ವಿಗ್ನತೆ ಉಂಟಾಯಿತು. ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನವನ್ನು ತಡೆಯಲು ಜಗ್ಗಯ್ಯಪೇಟೆ ಬಳಿಯ ಗರಿಕಪಾಡು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದರು. ಗಲಾಟೆ ಮಾಡಿದ ಜನಸೇನಾ ಕಾರ್ಯಕರ್ತರ ಮೇಲೆ ಲಾಠಿಪ್ರಹಾರವೂ ನಡೆಯಿತು.
ಇದನ್ನೂ ಓದಿ:ಪೆಸಿಫಿಕ್​ ಸಾಗರದ ಆಳದಲ್ಲಿ ನಿಗೂಢ ಚಿನ್ನದ ಮೊಟ್ಟೆ ಪತ್ತೆ! ಅಚ್ಚರಿಗೀಡಾದ ವಿಜ್ಞಾನಿಗಳು
ಈ ಘಟನೆಯಿಂದಾಗಿ ವಿಜಯವಾಡ-ಹೈದರಾಬಾದ್ ಹೆದ್ದಾರಿ ಟ್ರಾಫಿಕ್ ಕಿಕ್ಕಿರಿದು ತುಂಬಿತ್ತು. ಪವನ್ ಕಲ್ಯಾಣ್ ಅವರನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಜನಸೇನಾ ಕಾರ್ಯಕರ್ತರು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು.
ಚಂದ್ರಬಾಬು ನಾಯ್ಡು ಬಂಧನ;ಶನಿವಾರ ಮುಂಜಾನೆ ಆಂಧ್ರಪ್ರದೇಶದ ಸಿಐಡಿ ಪೊಲೀಸರು ರಾಜ್ಯದ ಮಾಜಿ ಮುಖ್ಯಮಂತ್ರಿ, ತೆಲಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡುವನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿದ್ದರು. ಆಂಧ್ರ ಪ್ರದೇಶದ ಕೌಶಾಲಾಭಿವೃದ್ಧಿ ನಿಗಮದಲ್ಲಿ ನಡೆದಿರುವ 550 ಕೋಟಿ ರೂ. ಅವ್ಯವಹಾರ ಪ್ರಕರಣದಲ್ಲಿ ಎನ್. ಚಂದ್ರಬಾಬು ನಾಯ್ಡು ಮೊದಲ ಆರೋಪಿ ಎಂದು ಸಿಐಡಿ ಎಡಿಜಿಪಿ ಎನ್. ಸಂಜಯ್ ಹೇಳಿದ್ದಾರೆ. ಅವರು ಸಿಎಂ ಆಗಿದ್ದಾಗ ನಿಗಮಕ್ಕೆ ಬಿಡುಗಡೆಯಾಗಿದ್ದ 3,300 ಕೋಟಿ ರೂ. ಅನುದಾನದಲ್ಲಿ ಅವ್ಯವಹಾರವಾಗಿದ್ದು, ಸರ್ಕಾರಕ್ಕೆ 370 ಕೋಟಿ ರೂ. ವಂಚನೆಯಾಗಿದೆ ಎಂಬುದು ಆರೋಪವಾಗಿದೆ.
ಪೆಸಿಫಿಕ್​ ಸಾಗರದ ಆಳದಲ್ಲಿ ನಿಗೂಢ ಚಿನ್ನದ ಮೊಟ್ಟೆ ಪತ್ತೆ! ಅಚ್ಚರಿಗೀಡಾದ ವಿಜ್ಞಾನಿಗಳು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 2 =
Remember me
