ಹೈದರಾಬಾದ್​:ಆಂಧ್ರ ಪ್ರದೇಶದಲ್ಲಿ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ತೆಲುಗು ನಟ ಹಾಗೂ ರಾಜಕಾರಣಿ ಪವನ್​ ಕಲ್ಯಾಣ್​ ಅವರ ಜನಸೇನಾ ಪಾರ್ಟಿಯೊಂದಿಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೈಜೋಡಿಸಿದೆ.
ಉಭಯ ಪಕ್ಷದ ನಾಯಕರು ಗುರುವಾರ ವಿಜಯವಾಡದಲ್ಲಿ ಪ್ರಮುಖ ಸಭೆ ನಡೆಸಿದ ಬೆನ್ನಲ್ಲೇ ಮೈತ್ರಿ ಮಾಡಿಕೊಂಡಿರುವುದು ಅಧಿಕೃತವಾಗಿ ಘೋಷಣೆಯಾಗಿದೆ. ಈ ಬಗ್ಗೆ ಮಾತನಾಡಿರುವ ಪವನ್​ ಕಲ್ಯಾಣ್​, 2024ರಲ್ಲಿ ಅಧಿಕಾರಕ್ಕೇರಲು ಬಿಜೆಪಿ ಮತ್ತು ಜೆಎಸ್​ಪಿ ಆಂಧ್ರ ಪ್ರದೇಶದಲ್ಲಿ ಒಟ್ಟಿಗೆ ಕೆಲಸ ಮಾಡಲಿದೆ. ರಾಜ್ಯದ ಜನರ ಒಳಿತಿಗಾಗಿ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಇದಕ್ಕೂ ಮುಂಚೆ ಜನವರಿ 13ರಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪವನ್​ ಕಲ್ಯಾಣ್​ರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಆಂಧ್ರ ಪ್ರದೇಶದಲ್ಲಿ ಒಟ್ಟಿಗೆ ಕೆಲಸ ಮಾಡಲು ಚರ್ಚೆ ನಡೆದಿತ್ತು. ಅದರಲ್ಲೂ ಆಂಧ್ರ ಪ್ರದೇಶ ರಾಜಧಾನಿಯನ್ನು ಅಮರಾವತಿಯಿಂದ ಸ್ಥಳಾಂತರಿಸುವ ಜತೆಗೆ ಆಂಧ್ರದ ವೈಎಸ್​ಆರ್​ ಕಾಂಗ್ರೆಸ್ ಸರ್ಕಾರ ಇಟ್ಟಿರುವ ಮೂರು ಪ್ರಸ್ತಾವನೆಯಿಂದ ಉಂಟಾಗಿರುವ ಬೆಳವಣಿಗೆಯ ಬೆನ್ನಲ್ಲೇ ಬಿಜೆಪಿ ಮತ್ತು ಜೆಎಸ್​ಪಿ ಮೈತ್ರಿ ಮಾಡಿಕೊಂಡಿದೆ.
ಆಂಧ್ರ ಇಟ್ಟಿರುವ ಮೂರು ರಾಜಧಾನಿ ಪ್ರಸ್ತಾವನೆ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಿದ್ದು, ಖಂಡಿತವಾಗಿ ಅಮರಾವತಿಯನ್ನು ರಾಜಧಾನಿಯನ್ನಾಗಿ ಮುಂದುವರಿಸಬೇಕೆಂದು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಒತ್ತಾಯಿಸಲಾಗಿದೆ. ಇದಕ್ಕೂ ಮುನ್ನ ಪವನ್​ ಕಲ್ಯಾಣ್​ ಕೂಡ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ನಡ್ಡಾ ಅವರಿಗೆ ವಿವರಿಸಿದ್ದಾರೆ. ಅದರಲ್ಲೂ ರಾಜಧಾನಿಯನ್ನು ಅಮರಾವತಿಯಿಂದ ವಿಶಾಖಪಟ್ಟಣಂಗೆ ಸ್ಥಳಾಂತರಿಸುವ ಪ್ರಸ್ತಾವನೆ ವಿರುದ್ಧ ಅಮರಾವತಿ ರೈತರು ಪ್ರತಿಭಟನೆ ನಡೆಸುತ್ತಿರುವುದನ್ನು ನಡ್ಡಾಗೆ ಪವನ್​ ವಿವರಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಪಾರ್ಟಿ ಹೀನಾಯ ಸೋಲು ಅನುಭವಿಸಿದ್ದಕ್ಕೆ ಬಿಜೆಪಿಯೊಂದಿಗೆ ಕೈಜೋಡಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದರು. 175 ಸ್ಥಾನಗಳಲ್ಲಿ ಕೇವಲ 1 ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದ್ದರು. ತಾವು ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಲ್ಲೂ ಪವನ್​ ಸೋಲುಂಡಿದ್ದರು. 2014ರ ಚುನಾವಣೆಯಲ್ಲಿ ಟಿಡಿಪಿ ಮತ್ತು ಬಿಜೆಪಿ ಮೈತ್ರಿ ಪರ ಪವನ್​ ಪ್ರಚಾರ ಮಾಡಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
