ನವದೆಹಲಿ:ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್​ ವೇಳಾಪಟ್ಟಿ ಬಿಡುಗಡೆಗೂ ಮುನ್ನವೇ ಖ್ಯಾತೆ ತೆಗೆದಿರುವ ಪಾಕಿಸ್ತಾನ ಭಾರತದಲ್ಲಿ ನಾವು ಆಡುವುದಿಲ್ಲ ಎಂದು ಹೇಳಿದೆ.
ಈ ಕುರಿತು ಪಾಕಿಸ್ತಾನ ಕ್ರಿಕೆಟ್​ ಬೋರ್ಡ್​(PCB) ಅಧ್ಯಕ್ಷ ನಜಮ್​ ಸೇಥಿ ಹೇಳಿಕೆ ನೀಡಿದ್ದು ಭದ್ರತೆಯ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್​ ಪಂದ್ಯವು ಅಹಮದಬಾಡ್​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಗಳು ದಟ್ಟವಾಗಿದೆ.
ಇನ್ನು ಈ ಕುರಿತು ಮಾತನಾಡಿರುವ ನಜಮ್​ ಸೇಥಿ ನಾವು ಭದ್ರತೆಯೆ ದೃಷ್ಟಿಯಿಂದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲು ಸಾಧ್ಯವಿಲ್ಲ. ಬದಲಿ ತಾಣದಲ್ಲಿ ಪಂದ್ಯ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:WORLD CUP 2023: ವಿಶ್ವಕಪ್​ ಆಡಲು ಪಾಕಿಸ್ತಾನಕ್ಕೆ ಭಾರತದ ಈ 2 ನಗರಗಳು ಮಾತ್ರ ಸುರಕ್ಷಿತವಂತೆ!
ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಪಂದ್ಯ ನಡೆದರೆ ಹೆಚ್ಚು ಅರ್ಥಪೂರ್ಣವಾಗಿರುತ್ತದೆ. ಆದರೆ, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಹೇಳಿದ್ದಾರೆ.
ಮೊದಲಿಗೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಸುವ ಬಗ್ಗೆ ನನಗೆ ಮಾಹಿತಿ ತಿಳಿದಾಗ ಇದರಲ್ಲಿ ರಾಜಕೀಯ ಕೋನವಿದೆ.
ಚೆನ್ನೈ ಹಾಗೂ ಕೊಲ್ಕತ್ತಾದಲ್ಲಿ ಪಂದ್ಯವನ್ನು ಆಯೋಜಿಸಿದ್ದರೆ ನಾವು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುತ್ತಿದ್ದೆವು. ಆದರೆ, ಭದ್ರತೆಯ ದೃಷ್ಟಿಯಿಂದ ನಾವು ಅಹಮದಬಾದ್​ನಲ್ಲಿ ಆಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − sixteen =
Remember me
