ನವದೆಹಲಿ​:ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಭಾಗಿಯಾಗಲು ಭಾರತಕ್ಕೆ ತೆರಳಲು ಅನುಮತಿ ಕೋರಿ ಪಾಕಿಸ್ತಾನ ಕ್ರಿಕೆಟ್​ ಮಂಡಳಿ(PCB) ಪ್ರಧಾನಿ ಶೆಹಬಾಜ್​ ಷರೀಫ್​ ಅವರಿಗೆ ಪತ್ರ ಬರೆದಿದೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.
ಈ ಕುರಿತು ಪಾಕ್​ ಪ್ರಧಾನಿ, ವಿದೇಶಾಂಗ ಇಲಾಖೆಗೆ ಪತ್ರ ಬರೆದಿರುವ ಪಿಸಿಬಿ ಪಾಕಿಸ್ತಾನ ತಂಡವು ಭಾರತಕ್ಕೆ ತೆರಳಲು ಅವಕಾಶ ಇದೆಯೇ. ಒಂದು ವೇಳೆ ಅವಕಾಶ ಇದೇ ಎಂದಾದರೆ ಪಾಕಿಸ್ತಾನ ತಂಡಕ್ಕೆ ನಿಗದಿಪಡಿಸಿರುವ ಐದು ತಾಣಗಳ ಬಗ್ಗೆ ಏನಾದರೂ ಆಕ್ಷೇಪ ಇದೆಯಾ ಎಂದು ಪತ್ರದಲ್ಲಿ ಕೇಳಿದೆ.
ಇದನ್ನೂ ಓದಿ:ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿದ್ದರಾಮಯ್ಯ
ವಿಶ್ವಕಪ್​ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ನಾವು ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪ್ರಧಾನಿ ಕಾರ್ಯಾಲಯ ಹಾಗೂ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದೇವೆ. ಭಾರತಕ್ಕೆ ತೆರಳುವ ಬಗ್ಗೆ ಹಾಗೂ ನಮ್ಮ ತಂಡಕ್ಕೆ ನಿಗದಿಪಡಿಸಿರುವ ತಾಣಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ನಾವು ಸರ್ಕಾರಕ್ಕೆ ಬಿಟ್ಟಿದ್ದೇವೆ.
ಸರ್ಕಾರದ ಮೇಲೆ ನಮಗೆ ಸಂಪೂರ್ಣ ವಿಶ್ವಾವಿದ್ದು, ಅವರು ನೀಡುವ ಸಲಹೆ ಸೂಚನೆಗಳನ್ನು ನಾವು ಪಾಲಿಸುತ್ತೇವೆ. ನಿಗದಿಪಡಿಸಿರುವ ತಾಣಗಳ ಪರಿಶೀಲನೆ ನಡೆಸಲು ಸರ್ಕಾರ ಭಾರತಕ್ಕೆ ನಿಯೋಗವನ್ನುಇ ಕಳುಹಿಸಿದರು ನಾವು ಅದನ್ನು ಸ್ವಾಗತಿಸುತ್ತೇವೆ ಎಂದು ಪಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
