ಪಾಟನಾ:ಬಿಹಾರದ ಪಾಟ್ನಾ ರೈಲು ನಿಲ್ದಾಣದಲ್ಲಿ ಅಳವಡಿಸಿದ್ದ ಟಿ.ವಿ. ಪರದೆಯಲ್ಲಿ ಮೂರು ನಿಮಿಷಗಳ ಕಾಲ ನೀಲಿ ಚಿತ್ರ ಪ್ರದರ್ಶನಗೊಂಡ ಘಟನೆ ನಿನ್ನೆ (ಮಾ.19) ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. ಈ ಘಟನೆಯಿಂದ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೊಳಗಾದ ಸನ್ನಿವೇಶ ಎದುರಾಗಿದೆ.
ರೈಲ್ವೇ ನಿಲ್ದಾಣದ ಟಿ.ವಿ.ಯಲ್ಲಿ ನೀಲಿಚಿತ್ರ ಪ್ರದರ್ಶನವಾಗುತ್ತಿದ್ದಂತೆ ಪ್ರಯಾಣಿಕರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಧಿಕಾರಿಗಳು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್)ಗೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಕತಾರ್​ನಲ್ಲಿ ಕಬ್ಜ ಚಿತ್ರದ ಅದ್ದೂರಿ ಪ್ರದರ್ಶನ; ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು
ದೂರು ದಾಖಲಿಸಿಕೊಂಡ ಆರ್​ಪಿಎಫ್ ಅಧಿಕಾರಿಗಳು, ಟಿ.ವಿಯಲ್ಲಿ ಜಾಹೀರಾತು ಪ್ರದರ್ಶಿಸುವ ಜವಾಬ್ದಾರಿ ವಹಿಸಿಕೊಂಡ ದತ್ತಾ ಕಮ್ಯುನಿಕೇಷನ್ ಸಂಸ್ಥೆಯನ್ನು ಸಂಪರ್ಕಿಸಿ ನೀಲಿ ಚಿತ್ರ ಪ್ರದರ್ಶನವಾಗುತ್ತಿರುವುದನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಬಳಿಕ ರೈಲ್ವೇ ಅಧಿಕಾರಿಗಳು ದತ್ತಾ ಕಮ್ಯುನಿಕೇಷನ್ ವಿರುದ್ಧ ಎಫ್ಐಆರ್ ದಾಖಲಿಸಿ, ದಂಡ ವಿಧಿಸಿದ್ದಾರೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೇ ಅಧಿಕಾರಿಗಳು, ನಿಲ್ದಾಣದಲ್ಲಿ ಟಿ.ವಿ ಪರದೆಯ ಮೇಲೆ ಜಾಹೀರಾತುಗಳನ್ನು ಪ್ರಸಾರ ಮಾಡಲು ಏಜೆನ್ಸಿಗೆ ನೀಡಲಾಗಿದ್ದ ಗುತ್ತಿಗೆಯನ್ನು ರದ್ದುಗೊಳಿಸಿದ್ದಾರೆ ಎಂದು ವರದಿಯಾಗಿದೆ.(ಏಜೆನ್ಸೀಸ್)
ಇದನ್ನೂ ಓದಿ:ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಆಜಾನ್​ ಕೂಗಿದ ಯುವಕ; ಆತನ ಧೈರ್ಯದ ಹಿಂದೆ ಇರೋದು ಕಾಂಗ್ರೆಸ್ ಪಕ್ಷ ಎಂದ ಶೋಭಾ ಕರಂದ್ಲಾಜೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 1 =
Remember me
