ನವದೆಹಲಿ:ದೇಶದ ಜನತೆಗೆ ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ರೀತಿ ಪ್ರತಿಕ್ರಿಯಿಸಿದರು.
ವಿರೋಧ ಪಕ್ಷದವರು ಕಳೆದ ಅವಧಿಯಲ್ಲೂ ಅವಿಶ್ವಾಸ ನಿರ್ಣಯ ಕೈಗೊಂಡಿದ್ದರು. ದೇಶದ ಜನತೆ ಆವಾಗಲೇ ಅವರಿಗೆ ಬುದ್ಧಿ ಕಲಿಸಿದ್ದರು ಎಂದು ಜೋಶಿ, ಜನರಿಗೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿದೆ ಎಂದರು.
ಇದನ್ನೂ ಓದಿ:ಎಕ್ಸಾಂ ದಿನವೇ ವಿದ್ಯಾರ್ಥಿ ಸಾವು ಪ್ರಕರಣದ ಇನ್ನೊಂದು ಮುಖ: ಏಕೈಕ ಪುತ್ರನನ್ನು ಕಳೆದುಕೊಂಡ ತಾಯಿಯ ಪ್ರಶ್ನೆಗಳಿವು..
ಅವಿಶ್ವಾಸ ಗೊತ್ತುವಳಿ ವಿಚಾರವಾಗಿ ನಿನ್ನೆಯೂ ಸುದ್ದಿಗಾರರ ಜತೆ ಮಾತನಾಡಿದ್ದ ಜೋಶಿ, ನಮ್ಮ ಮೊದಲ ಅವಧಿಯಲ್ಲೂ ವಿರೋಧ ಪಕ್ಷದವರು ಅವಿಶ್ವಾಸ ಮಂಡನೆಗೆ ಮುಂದಾಗಿದ್ದರು. ಆದರೆ 2019ರಲ್ಲಿ ನಮ್ಮ ಸಂಸದರ ಸಂಖ್ಯೆ 282ರಿಂದ 303ಕ್ಕೆ ಏರಿತು. ಅವರು ಬೇಕಿದ್ದರೆ ಈ ಸಲವೂ ಅವಿಶ್ವಾಸ ಮಂಡನೆಗೆ ಮುಂದಾಗಲಿ, ಈ ಬಾರಿ ನಾವು 350ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದಿದ್ದರು.
ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಕಂಡಕ್ಟರ್​ ಹತ್ತಿರ ಜಗಳವಾಡಿದ ಯುವತಿ; ಕೇಂದ್ರ ಸರ್ಕಾರಿ ಉದ್ಯೋಗಿ ಎಂದು ರಂಪ

‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eighteen =
Remember me
