ನವದೆಹಲಿ:ಭಾರತ ವಿಭಜನೆಯ ಮಾತುಗಳನ್ನಾಡುವ ಶಾರ್ಜಿಲ್​ ಇಮಾಮ್​ರಂತವರನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ಬಿಜೆಪಿ ಶಾಸಕ ಸಂಗೀತ್​ ಸೋಮ್​ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಾಹೀನ್​ ಬಾಘ್​ನಲ್ಲಿ ಸಿಎಎ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಮಹಿಳೆಯರು ಯಾವುದೇ ಕೆಲಸದಲ್ಲಿಲ್ಲ. ಹೀಗಾಗಿ ಇಂತಹ ಪ್ರತಿಭಟನೆಗೆ ಹಣವನ್ನು ನೀಡುತ್ತಿರುವ ಮೂಲ ಯಾವುದು ಎಂಬುದನ್ನು ತನಿಖೆ ಮೂಲಕ ಪತ್ತೆ ಹಚ್ಚಬೇಕಿದೆ. ಹಾಗೇ ಶಾರ್ಜಿಲ್​ ಇಮಾಮ್​ರಂತೆ ದೇಶ ವಿಭಜನೆ ಮಾತಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕಾಗಿದೆ ಎಂದರು.
ಅಂದಹಾಗೆ ಇಮಾಮ್​, ಜೆಎನ್​ಯು ಮಾಜಿ ವಿದ್ಯಾರ್ಥಿ. ಪ್ರತಿಭಟನಾ ವೇಳೆ ಅಸ್ಸಾಂ ಅನ್ನು ಭಾರತದಿಂದ ವಿಭಜಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ಪೊಲೀಸ್​ ಗಮನಕ್ಕೆ ಬಂದಿತ್ತು. ತಲೆಮರೆಸಿಕೊಂಡಿದ್ದ ಇಮಾಮ್​ನನ್ನು ದೆಹಲಿ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದರು.
ಗುರುವಾರವಷ್ಟೇ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಜಾಮಿಯಾ ಏರಿಯಾದಲ್ಲಿ ಪ್ರತಿಭಟನೆ ನಡೆಸುವಾಗ ವ್ಯಕ್ತಿಯೊಬ್ಬ ಪೊಲೀಸರ ಎದುರೇ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದಾದ ಒಂದು ದಿನದ ಬೆನ್ನಲ್ಲೇ ಶಾಸಕ ಸೋಮ್​ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗುರಿಯಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್​ ಪ್ರಚೋದನೆಯಿಂದಲೇ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಈಗಾಗಲೇ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fifteen =
Remember me
