ಊಟಿ:ಮನುಷ್ಯರ ಕ್ರೂರಿ ಬುದ್ಧಿಗೆ ಕೊನೆಯಿಲ್ಲ ಎನ್ನುತ್ತಾರೆ. ಆ ಮಾತಿಗೆ ಸಾಕ್ಷಿ ಎನ್ನುವಂತೆ ಒಂದು ಅಘಾತಕಾರಿ ಘಟನೆ ಊಟಿಯಲ್ಲಿ ನಡೆದಿದೆ. ಕಾಡು ಪ್ರದೇಶದಲ್ಲಿ ಎಸ್ಟೇಟ್​ ಒಂದರ ಒಳಗೆ ಬರಲು ಪ್ರಯತ್ನಿಸಿದ ಆನೆಗೆ ಇಬ್ಬರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಊಟಿಯ ಕಾಡು ಪ್ರದೇಶದ 40 ವರ್ಷದ ಆನೆಯೊಂದು ಜನವರಿ 19ರಂದು ಎಸ್ಟೇಟ್​ ಒಂದರ ಒಳಗೆ ಬರಲು ಪ್ರಯತ್ನಿಸಿದೆ. ಈ ಸಮಯದಲ್ಲಿ ಎಸ್ಟೇಟ್​ ಕಾವಲು ಕಾಯುತ್ತಿದ್ದ ರೈಮಾನ್ ಮತ್ತು ಪ್ರಶಾಂತ್ ಒಂದು ಟೈಯರ್​ಗೆ ಬೆಂಕಿ ಹಚ್ಚಿ ಅದನ್ನು ಆನೆಯ ಮೇಲೆ ಎಸೆದಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದ ಟೈಯರ್​ನ್ನು ಹೊತ್ತ ಆನೆ ನೋವಿನಿಂದ ಕೂಗಿಕೊಳ್ಳುತ್ತ ಸ್ವಲ್ಪ ದೂರ ಹೋಗಿದೆ. ಆನೆಯ ಕಿವಿ ಮತ್ತು ಹಿಂಭಾಗದಲ್ಲಿ ಸುಟ್ಟ ಗಾಯಗಳಾಗಿವೆ.
ಆನೆಗೆ ಬೆಂಕಿ ಹಚ್ಚಿದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ:
https://fb.watch/3aKz1hqppw/
ಅಸ್ವಸ್ಥವಾಗಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ಕಂಡಿದ್ದು, ವೈದ್ಯಕೀಯ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ. ಆದರೆ ಅದಾಗಲೇ ಸುಟ್ಟ ಗಾಯದಿಂದ ಸಾಕಷ್ಟು ನೋವುಂಡಿದ್ದ ಆನೆ ಕೊನೆಯುಸಿರೆಳೆದಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಶಾಂತ್​ ಮತ್ತು ರೈಮಾನ್​ನನ್ನು ಬಂಧಿಸಲಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
