ಪಶ್ಚಿಮ ಬಂಗಾಳ:ಭ್ರಷ್ಟ ರಾಜಕಾರಣಿಗಳು ದಾಳಿಗೆ ಒಳಗಾಗಿ ಬಂಧನಕ್ಕೆ ಒಳಗಾಗುವುದು, ವಿಚಾರಣೆಗೆ ಈಡಾಗುವುದು ಮುಂತಾದವೆಲ್ಲ ಸರ್ವೇಸಾಮಾನ್ಯ. ಆದರೆ ಇಲ್ಲೊಂದು ಕಡೆ ಭ್ರಷ್ಟ ರಾಜಕಾರಣಿಯೊಬ್ಬ ಸಾರ್ವಜನಿಕರಿಂದ ಬಹಿರಂಗವಾಗಿ ತೀವ್ರ ಮುಜುಗರಕ್ಕೊಳಗಾದ ಪ್ರಸಂಗವೊಂದು ನಡೆದಿದೆ.
ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ ಪಕ್ಷದ ಬಿರ್​ಭುಮ್​ ಜಿಲ್ಲಾಧ್ಯಕ್ಷ ಅನುಬ್ರತ ಮೊಂಡಲ್ ಮುಜುಗರಕ್ಕೆ ಒಳಗಾದವರು. ಮೇವು ಹಗರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಈತನನ್ನು ಇಂದು ವಿಚಾರಣೆಗಾಗಿ ಅಸಾನ್ಸಲ್​ ಎಂಬಲ್ಲಿನ ಸಿಬಿಐ ನ್ಯಾಯಾಲಯಕ್ಕೆ ಕರೆ ತರಲಾಗಿತ್ತು.
ಈ ಸಂದರ್ಭದಲ್ಲಿ ಮೊಂಡಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಶೂ ತೋರಿ ‘ಕಳ್ಳ ಕಳ್ಳ’ ಎಂದು ಕೂಗಿದ್ದಾರೆ. ಪೊಲೀಸರ ವಶದಲ್ಲಿದ್ದ ಮೊಂಡಲ್ ಸಾರ್ವಜನಿಕರು ಬಹಿರಂಗವಾಗಿ ವ್ಯಕ್ತಪಡಿಸಿದ ಆಕ್ರೋಶದಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದು ಕಂಡುಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಂಡಲ್​ನನ್ನು ಸಿಬಿಐ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದೆ.
ಊರಲ್ಲಿ ಸ್ಮಶಾನ ಇಲ್ಲದ್ದರಿಂದ ಗ್ರಾಮ ಪಂಚಾಯತ್ ಆವರಣದಲ್ಲೇ ಶವಸಂಸ್ಕಾರಕ್ಕೆ ಸಜ್ಜಾದ ಗ್ರಾಮಸ್ಥರು!
Fact Check: ರಾಷ್ಟ್ರಧ್ವಜ ಖರೀದಿಸದಿದ್ದರೆ ರೇಷನ್ ಕೊಡಲ್ವಾ?; ಇಲ್ಲಿದೆ ಸತ್ಯಾಂಶ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 3 =
Remember me
