ಅನಕಾಪಲ್ಲಿ:ಬಿಯರ್​ ಬಾಟಲಿಗಳನ್ನು ಸಾಗಿಸುತ್ತಿದ್ದ ಟ್ರಕ್​ ಪಲ್ಟಿಯಾಗಿದ್ದರೂ, ಸಹಾಯ ಮಾಡದೇ ಬಾಟಲಿಗಳನ್ನು ಕದ್ದೊಯ್ದ ಅಮಾನವೀಯ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ತನ್ನ ಮದುವೆಯನ್ನು ತಾನೇ ನಿಲ್ಲಿಸಿದ ಅಪ್ರಾಪ್ತೆ: ಜೂನ್​ 8ರಂದು ನಡೆಯಬೇಕಿದ್ದ ವಿವಾಹ
ಅನಕಾಪಲ್ಲಿ ಮತ್ತು ಬಯ್ಯವರಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾವಿನದವಡೆಯಿಂದ ಪಾರಾಗಿದ್ದಾರೆ.
ಟ್ರಕ್​ ಬಿದ್ದ ಕೂಡಲೇ ಇತರ ವಾಹನಗಳ ಸವಾರರು ಹಾಗೂ ಸ್ಥಳೀಯರು, ಲಾರಿ ಚಾಲಕ ಹಾಗೂ ಕ್ಲೀನರ್‌ಗೆ ಸಹಾಯ ಮಾಡುವುದನ್ನು ಬಿಟ್ಟು ಬಿಯರ್​ ಬಾಟಲಿಗಳನ್ನು ಕದ್ದಿದ್ದಾರೆ. ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರಿಂದ ನಾನಾರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − two =
Remember me
