ಮುಂಬೈ:ಆಟೋ ಪಡೆಯಲು ಬಹಳ ತಾಳ್ಮೆಯಿಂದ ಸರತಿ ಸಾಲಿನಲ್ಲಿ ನಿಂತ ಮುಂಬೈ ಜನರ ದೃಶ್ಯಾವಳಿಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral) ಆಗಿದೆ.
ಇದನ್ನೂ ಓದಿ:ಏ ಟ್ರೇಲರ್ ಹೈ, ಪಿಚ್ಚರ್ ಅಭಿ ಬಾಕಿ ಹೈ: ಹೆಣ್ಣುಮಕ್ಕಳ ಸಾಧನೆ ಬಗ್ಗೆ ರಾಷ್ಟ್ರಪತಿ ಮುರ್ಮು ಮಾರ್ಮಿಕ ಮಾತು
ಈ ಒಂದು ವಿಡಿಯೋ ಟ್ವಿಟರ್​ನಲ್ಲಿ (Twitter) ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ನೆಟ್ಟಿಗರು ದೃಶ್ಯಾವಳಿಯ ತುಣುಕನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯ ಶೀರ್ಷಿಕೆ ನೀಡಿ ಶೇರ್ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಜನರು ತಮ್ಮ ಕೆಲಸ ಮುಗಿಸಿ ಮನೆಗೆ ಹೊರಡುವ ವೇಳೆ ಬಸ್​​, ಮೆಟ್ರೋ, ರೈಲು ಅಥವಾ ತಮ್ಮದೇ ಖಾಸಗಿ ವಾಹನದಲ್ಲಿ ಪ್ರಯಾಣಿಸುವಾಗ ಸದಾ ಆತುರದಲ್ಲಿ ಇರುವುದು ನಮಗೆಲ್ಲಾ ತಿಳಿದಿರುವ ವಿಚಾರ! ಆದ್ರೆ, ಮುಂಬೈ ನಗರ ಜನರು ಆಟೋ ಸೇವೆ ಪಡೆಯಲು ಬಹಳ ಸಂಯಮತೆಯಿಂದ ಸರತಿ ಸಾಲಿನಲ್ಲಿ ನಿಂತು ಪ್ರಯಾಣಿಸಿರುವುದು ಇದೀಗ ನೆಟ್ಟಿಗರನ್ನು ನಿಬ್ಬೆರಗಾಗಿಸಿದೆ.
ಸದ್ಯ ಈ ವೀಡಿಯೋ ವೀಕ್ಷಿಸಿದ ನೆಟ್ಟಿಗರು ತಮ್ಮ ಅನಿಸಿಕೆಯನ್ನು ಈ ರೀತಿ ಹಂಚಿಕೊಂಡಿದ್ದಾರೆ. ಮಿಂಚಿನಂತೆ ಓಡುವ ಜಗತ್ತಿನಲ್ಲಿ ಇಷ್ಟು ತಾಳ್ಮೆಯಿಂದ ನಿಂತಿರುವ ಮುಂಬೈ ಜನತೆಗೆ ನಿಜಕ್ಕೂ ಸಲಾಂ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಇದು ಮುಂಬೈ ಜನತೆಯ ಸ್ಪಿರಿಟ್​ ಎಂದು ಕಮೆಂಟ್​ ಮಾಡಿದ್ದಾರೆ,(ಏಜೆನ್ಸೀಸ್).

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four × three =
Remember me
