ನವದೆಹಲಿ:ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಕನ್ಹಯ್ಯ ಕುಮಾರ್ 2016ರ ಫೆಬ್ರವರಿಯಲ್ಲಿ ನಡೆದ ಕ್ಯಾಂಪಸ್ ಕಾರ್ಯಕ್ರಮದಲ್ಲಿ ರಾಷ್ಟ್ರ ವಿರೋಧಿ ಘೋಷಣೆ ಕೂಗಿ, ಮೆರವಣಿಗೆ ಮುನ್ನಡೆಸಿದ್ದರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಸರ್ಕಾರ ಅನುಮತಿ ನೀಡಿದೆ.
ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆಗೆ ಅನುಮತಿ ಕೋರಿ ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಪತ್ರ ಬರೆದಿದ್ದರು, ಇದಕ್ಕೆ ಸಿಎಂ ಅನುಮತಿ ನೀಡಿದ್ದಾರೆ.
ಫೆಬ್ರವರಿ 9 ರಂದು ನಡೆದ ಕಾರ್ಯಕ್ರಮದಲ್ಲಿ ಕನ್ಹಯ್ಯ ಕುಮಾರ್​ ಮೆರವಣಿಗೆ ಮುನ್ನಡೆಸಿದ್ದರು. ಕ್ಯಾಂಪಸ್‌ನಲ್ಲಿ ಕೂಗಿದ್ದ ದೇಶದ್ರೋಹಿ ಘೋಷಣೆಗಳಿಗೆ ಬೆಂಬಲಿಸಿದ ಆರೋಪಿವಿತ್ತು
ಈ ಹಿನ್ನೆಲೆಯಲ್ಲಿ ಕನ್ಹಯ್ಯ ಕುಮಾರ್ ಮತ್ತು ಜೆಎನ್‌ಯು ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಸೇರಿ ಇತರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು.
ಪ್ರಕರಣ ಕೈಗೆತ್ತಿಕೊಂಡ ಕೋರ್ಟ್​ ಕಾನೂನು ಕ್ರಮ ಜರುಗಿಸಲು ಅಗತ್ಯವಾದ ಅನುಮತಿಯನ್ನು ಸರ್ಕಾರದಿಂದ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿ ಸಿಎಂಗೆ ಪತ್ರ ಬರೆದಿದ್ದರು.(ಏಜೇನ್ಸಿಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
