ಪಟ್ನಾ:ಸನಾತನ ಧರ್ಮ ನಿರ್ಮೂಲನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ ಹಾಗೂ ಅವರ ಪುತ್ರ, ಸಚಿವ ಉದಯನಿಧಿ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಧಾರ್ಮಿಕ ಭಾನವೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತಮಿಳುನಾಡು ಸಿಎಂ ಸ್ಟಾಲಿನ್​ ಹಾಗು ಸಚಿವ ಉದಯನಿಧಿ ವಿರುದ್ಧ ವಕೀಲ ಸುಧೀರ್​ ಕುಮಾರ್​ ಓಜಾ ಎಂಬುವವರು ಬಿಹಾರದ ಮುಜಾಫರ್​ಪುರ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್​ ಪಂಕಜ್​ ಕುಮಾರ್​ ಲಾಲ್​ ಅವರಿಗೆ ದೂರು ಸಲ್ಲಿಸಿದ ವಕೀಲ ಸುಧೀರ್​ ಕುಮಾರ್​ ತಮಿಳುನಾಡು ಸಿಎಂ ಸ್ಟಾಲಿನ್​ ಹಾಗು ಸಚಿವ ಉದಯನಿಧಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ರಾಜಕೀಯ ನಾಯಕರು ಹಾಗೂ ಸೆಲೆಬ್ರಿಟಿಗಳ ವಿರುದ್ಧ ದಾವೆ ಹೂಡುವ ಮೂಲಕ ವಕೀಲ ಸುಧೀರ್​ ಕುಮಾರ್​ ಖ್ಯಾತಿ ಪಡೆದಿದ್ದಾರೆ.
ಇದನ್ನೂ ಓದಿ:ಸನಾತನ ಧರ್ಮದ ಕುರಿತು ಹೇಳಿಕೆ; ಬಿಜೆಪಿಯವರು ನನ್ನ ಮಾತನ್ನು ತಿರುಚಿ ವಿವಾದವನ್ನು ಹುಟ್ಟುಹಾಕಿದ್ದಾರೆ: ಉದಯನಿಧಿ ಸ್ಟಾಲಿನ್
ಡಿಎಂಕೆ ಯುವ ಘಟಕದ ಪ್ರದಾನ ಕಾರ್ಯದರ್ಶಿ ಹಾಗೂ ತಮಿಳುನಾಡು ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್​ ಪ್ರಗತಿಪರ ಲೇಖಕರು ಹಾಗೂ ಕಲಾವಿದರು ಆಯೋಜನೆ ಮಾಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ.
ಮಲೇರಿಯಾ, ಡೆಂಘೆ, ಕೋವಿಡ್​ನಂತಹ ಸೋಂಕನ್ನು ವಿರೋದಿಸಬಾರದು ಬದಲಿಗೆ ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ನಾವು ಸನಾತನ ಧರ್ಮವನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು ಎಂದು ಸಮಾವೇಶದಲ್ಲಿ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು ಮತ್ತು ಹೊಸ ವಿವಾದವನ್ನು ಹುಟ್ಟು ಹಾಕಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 4 =
Remember me
