ಲಖನೌ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ಧಾರೆ. ಆದರೆ, ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನಾ ಸಮಾರಂಭವನ್ನು ನಿಷೇಧಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಗಾಜಿಯಾಬಾದ್​ ಮೂಲದ ಭೋಲಾ ದಾಸ್​ ಎಂಬ ವ್ಯಕ್ತಿಯೂ ಅರ್ಜಿ ಸಲ್ಲಿಸಿದ್ದು, ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ತಡೆ ನೀಡುವಂತೆ ಕೋರಿ ಅಲಹಾಬಾದ್​ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದು, ಶಂಕರಾಚಾರ್ಯರ ಆಕ್ಷೇಪಗಳನ್ನು ಉಲ್ಲೇಖಿಸಿ ಸಮಾರಂಭವನ್ನು ನಿಷೇಧಿಸುವಂತೆ ಕೋರಿದ್ದಾರೆ.
ಇದನ್ನೂ ಓದಿ:ಬಾಲರಾಮನ ಪ್ರತಿಷ್ಠಾಪನೆ ವೇಳೆ ರಾಮನಾಮ ಜಪಿಸುವಂತೆ ಕರೆ; ಗಾಯಕಿ ಕೆ.ಎಸ್​. ಚಿತ್ರಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕೆ
ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಶಂಕರಾಚಾರ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಪುಸ್​ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದಿಲ್ಲ. ದೇವಾಲಯ ಇನ್ನೂ ನಿರ್ಮಾಣ ಹಂತದಲ್ಲಿದ್ದು, ಅಪೂರ್ಣ ದೇವಸ್ಥಾನದಲ್ಲಿ ಯಾವುದೇ ದೇವರನ್ನು ಪ್ರತಿಷ್ಠಾಪಿಸಲು ಸಾಧ್ಯವಿಲ್ಲ. ಪ್ರಾಣ ಪ್ರತಿಷ್ಟಾಪನಾ ಕಾರ್ಯಕ್ರಮ ಸನಾತನ ಸಂಪ್ರದಾಯ ವಿರುದ್ಧದ ಅವ್ಯವಹಾರ ಮುಂಬರುವ ಲೋಕಸಭೆ ಚುನಾವಣೆಯ ದೃಷ್ಠಿಯಿಂದ ಈ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ರಾಮಮಂದಿರ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಸನಾತನ ಧರ್ಮದಲ್ಲಿ ಅಗ್ರಸ್ಥಾನದಲ್ಲಿರುವ ಮತ್ತು ನಮಗೆ ಮಾರ್ಗದರ್ಶನ ನೀಡುವ ಶಂಕರಾಚಾರ್ಯರು ಕಾರ್ಯಕ್ರಮಕ್ಕೆ ಬಹಿಷ್ಕರಿಸುವುದಾಗಿ ಹೇಳುತ್ತಿರುವಷ್ಟರ ಮಟ್ಟಿಗೆ ಇದು ಸಮಸ್ಯೆಯಾಗಿ ಪರಿಣಮಿಸಿದೆ. ಅವರು ಹೀಗೆ ಹೇಳುತ್ತಿದ್ದಾರೆ ಎಂದರೆ ಅದಕ್ಕೆ ಮಹತ್ವವಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − thirteen =
Remember me
