ಸೇಲಂ:ತಮಿಳುನಾಡಿನ ಸೇಲಂ ಜಿಲ್ಲೆಯ ಎಡಪ್ಪಾಡಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳು ಮಂಗಳವಾರ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ.ಸುಧಾಕರ್‌
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ತಕ್ಷಣ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ವೇಳೆ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ರಾಮಚಂದ್ರನ್ ಇನ್ಸ್‌ಪೆಕ್ಟರ್ ಬೇಬಿ ಅವರಿಗೆ ಘಟನೆಯನ್ನು ತಿಳಿಸಿದರು. ನಂತರ, ಮಾಹಿತಿ ಮೇರೆಗೆ ಸೇಲಂ ಪೊಲೀಸ್ ವರಿಷ್ಠಾಧಿಕಾರಿ ಎ.ಕೆ.ಅರುಣ್ ಕಬಿಲನ್ ಮತ್ತು ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಧಾವಿಸಿದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಚೆನ್ನೈನ ರಾಜಭವನ ಮುಖ್ಯ ದ್ವಾರಕ್ಕೆ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು. ತಮಿಳುನಾಡಿನ ನಿಜವಾದ ಕಾನೂನು ಸುವ್ಯವಸ್ಥೆಯನ್ನು ಈ ಘಟನೆಯು ಬಿಂಬಿಸುತ್ತಿದೆ ಎಂದು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ. ಅಣ್ಣಮಲೈ ತಿಳಿಸಿದ್ದಾರೆ.
ಮೇಘಾಲಯದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ನೈಟ್ ಕರ್ಫ್ಯೂ ಜಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
