ನವದೆಹಲಿ:ಒಂದೆಡೆ ಕರೊನಾ ವೈರಸ್​ ಪ್ರಮಾಣ ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೆ, ಇದರ ಹೊಡೆತದಿಂದಾಗಿ ಪೆಟ್ರೋಲ್​ ಮತ್ತು ಡೀಸೆಲ್​ ದರವೂ ಏರಿಕೆ ಕಾಣುತ್ತಲೇ ಇದೆ.
ಕಳೆದ ಎಂಟು ದಿನಗಳಿಂದ ಸ್ವಲ್ಪ ಸ್ವಲ್ಪವೇ ದರದಲ್ಲಿ ಏರಿಕೆ ಆಗುತ್ತಿದ್ದು, ಇದೀಗ ಸತತ 8ನೇ ದಿನ ಏರಿಕೆ ಕಂಡಿದೆ. ಪೈಸೆ ಪೈಸೆಯ ಲೆಕ್ಕದಲ್ಲಿ ಏರಿಕೆ ಕಾಣುತ್ತಿದ್ದರೂ, ದಿನವೂ ಹೆಚ್ಚುತ್ತಿರುವ ಕಾರಣ, ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದು ತಿಳಿಯದೇ ವಾಹನ ಸವಾರರಲ್ಲಿ ಆತಂಕ ಹೆಚ್ಚಿಸಿದೆ.
ಇದನ್ನೂ ಓದಿ:ಹೆಚ್ಚುವರಿ ಎಟಿಎಂ ಟ್ರ್ಯಾನ್ಸಾಕ್ಷನ್​ಗೆ ಜುಲೈ 1ರಿಂದ ಬೀಳುತ್ತೆ ದಂಡ!
ಇಂದು (ಭಾನುವಾರ) ಪೆಟ್ರೋಲ್ ದರದಲ್ಲಿ 62 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 64 ಪೈಸೆ ಏರಿಕೆಯಾಗಿದೆ. ಈ ಹೊಸ ದರದಿಂದಾಗಿ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.75.78 ಹಾಗೂ ಪ್ರತಿ ಲೀಟರ್ ಡೀಸೆಲ್ ದರ ರೂ.74.03ಕ್ಕೆ ಏರಿಕೆ ಕಂಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಂಪನಿಗಳು ಅನಿವಾರ್ಯವಾಗಿ ಪೆಟ್ರೋಲ್​ ಮತ್ತು ಡೀಸೆಲ್​ ದರಗಳನ್ನು ಹೆಚ್ಚು ಮಾಡುತ್ತಿವೆ. ಇದು ಮತ್ತೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.(ಏಜೆನ್ಸೀಸ್​)
ತುಂಡು ತುಂಡಾದ ದೇಹದ ನಿಗೂಢ ರಹಸ್ಯ ಭೇದಿಸಿದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
