ಶಿಲ್ಲಾಂಗ್​:ದೇಶಾದ್ಯಂತ ಪೆಟ್ರೋಲ್​ ಬೆಲೆಯಲ್ಲಿ ಸತತ ಏರಿಕೆ ಕಂಡುಬಂದಿರುವ ಬೆನ್ನಲ್ಲೇ ಮೇಘಾಲಯ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿನ ವ್ಯಾಟ್​ನ್ನು ಕಡಿಮೆ ಮಾಡುವ ಮೂಲಕ ಪ್ರತಿ ಲೀಟರ್​ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು 5 ರೂಪಾಯಿ ಇಳಿಕೆ ಮಾಡಲಾಗಿದೆ.
ರಾಜ್ಯದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆ ಖಂಡಿಸಿ ವಾಣಿಜ್ಯ ಸರಕು ಸಾಗಣೆದಾರರು ಮುಷ್ಕರ ಆರಂಭಿಸಿದ್ದಾರೆ. ದರ ಕಡಿಮೆ ಮಾಡದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದರು. ಆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಕಳೆದ ವಾರ ಮೇಘಾಲಯ ಸರ್ಕಾರವು ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ 2 ರೂಪಾಯಿ ಇಳಿಕೆ ಮಾಡಿತ್ತು. ಇದೀಗ ಎರಡನೇ ಬಾರಿ ಇಳಿಕೆ ಮಾಡಿದ್ದರಿಂದಾಗಿ ಪೆಟ್ರೋಲ್​ ಬೆಲೆಯಲ್ಲಿ 7.4 ರೂಪಾಯಿ ಹಾಗೂ ಡೀಸೆಲ್​ ಬೆಲೆಯಲ್ಲಿ 7.1 ರೂಪಾಯಿ ಇಳಿದಂತಾಗಿದೆ. ಸದ್ಯ ರಾಜ್ಯದಲ್ಲಿ ಪೆಟ್ರೋಲ್​ ಬೆಲೆ ಲೀಟರ್​ಗೆ 85.86 ರೂಪಾಯಿ ಹಾಗೂ ಡೀಸೆಲ್​ ಬೆಲೆ 79.13 ರೂಪಾಯಿಗೆ ಇಳಿದಿದೆ ಎಂದು ಮುಖ್ಯಮಂತ್ರಿ ಕೆ.ಸಂಗ್ಮಾ ತಿಳಿಸಿದ್ದಾರೆ. ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಕಳೆದ ಎಂಟು ದಿನಗಳಿಂದ ಸತತವಾಗಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಇದರಿಂದಾಗಿ ಕೇಂದ್ರ ಸರ್ಕಾರವ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. (ಏಜೆನ್ಸೀಸ್​)
ಈ ಬಂಕ್​ನಲ್ಲಿ ಸಿಗುತ್ತೆ ಫ್ರೀ ಪೆಟ್ರೋಲ್​…! ನೀವು ಈ ಸಾಲುಗಳನ್ನು ಹೇಳಿದರೆ ಸಾಕು…

ಟಾಪ್​ಲೆಸ್​ ರಿಹಾನ ಕೊರಳಲ್ಲಿ ಗಣೇಶನ ಪದಕ! ಕೆರಳಿಸುವ ಫೋಟೋ ಹೇಗಿದೆ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
