ನವದೆಹಲಿ:ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆ ಕಂಡು ಹೈರಾಣಾಗಿದ್ದ ವಾಹನ ಸವಾರರಿಗೆ ಇದು ಶುಭ ಬುಧವಾರ ಎನ್ನಬಹುದು. ಸತತ ಏರಿಕೆ ಕಂಡಿದ್ದ ಇಂಧನ ಬೆಲೆಯಲ್ಲಿ ಇಂದು ಇಳಿಕೆ ಕಂಡುಬಂದಿದೆ.
ರಾಷ್ಟ್ರ ರಾಜಧಾನಿ ನವದೆಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 18 ಪೈಸೆ ಮತ್ತು ಪ್ರತಿ ಲೀಟರ್​ ಡೀಸೆಲ್​ ಬೆಲೆಯಲ್ಲಿ 17 ಪೈಸೆ ಇಳಿಕೆ ಕಂಡುಬಂದಿದೆ. ಇದೀಗ ಒಂದು ಲೀಟರ್​ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಕ್ರಮವಾಗಿ 90.99 ರೂಪಾಯಿ ಹಾಗೂ 81.30 ರೂಪಾಯಿಯಾಗಿದೆ. ಬೆಂಗಳೂರಿನಲ್ಲೂ 18 ಪೈಸೆ ಇಳಿಕೆಯಾಗಿದ್ದು, ಒಂದು ಲೀಟರ್​ ಪೆಟ್ರೋಲ್​ ಬೆಲೆ 94.04 ರೂಪಾಯಿಯಾಗಿದೆ. ಡೀಸೆಲ್​ ಬೆಲೆ 86.21 ರೂಪಾಯಿಯಾಗಿದೆ.
ಕಳೆದ 15 ದಿನಗಳಲ್ಲಿ ಅಂತಾರಾಷ್ಟ್ರೀಯ ಕಚ್ಚಾ ತೈಲದ ದರದಲ್ಲಿ ಸತತ ಇಳಿಕೆ ಕಂಡುಬಂದಿದೆ. ಕೇವಲ 15 ದಿನಗಳಲ್ಲಿ ಬ್ಯಾರೆಲ್​ಗೆ 71 ಡಾಲರ್​ ಇದ್ದ ಕಚ್ಚಾ ತೈಲದ ದರ 64 ಡಾಲರ್​ಗೆ ಇಳಿದಿದೆ. ಇದರಿಂದಾಗಿ ಸಾರ್ವಜನಿಕ ವಲಯದ ತೈಲ ಸಂಸ್ಥೆಗಳು ಪೆಟ್ರೋಲ್​ ಮತ್ತು ಡೀಸೆಲ್​ ದರ ಇಳಿಸಲು ಹೆಚ್ಚಿನ ಅವಕಾಶ ಸಿಕ್ಕಿರುವುದಾಗಿ ಹೇಳಲಾಗಿದೆ. (ಏಜೆನ್ಸೀಸ್​)
9 ತಿಂಗಳ ಹಿಂದೆ ಫೇಸ್​ಬುಕ್​ನಲ್ಲಿ ಶುರುವಾದ ಪ್ರೀತಿ ದುರಂತ ಅಂತ್ಯ: ಯುವಜೋಡಿಗೆ ಮುಳುವಾಗಿದ್ದೇನು?

VIDEO | “ಬಂಗ್ಲಾ ಚಾಯಿ ಬಿಜೆಪಿ ಸರ್ಕಾರ್” : ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 11 =
Remember me
