ನವದೆಹಲಿ:ಕಳೆದ ಕೆಲವು ತಿಂಗಳಿನಿಂದ ಪೆಟ್ರೋಲ್​-ಡೀಸೆಲ್ ಬೆಲೆಯ ಜತೆಗೆ ಅಡುಗೆ ಅನಿಲದ ಬೆಲೆಯೂ ಸತತವಾಗಿ ಏರುತ್ತಲೇ ಬಂದಿದ್ದು, ಜನಸಾಮಾನ್ಯರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಇದೀಗ ಪೆಟ್ರೋಲ್-ಡೀಸೆಲ್ ಮಾತ್ರವಲ್ಲದೆ ಗ್ಯಾಸ್ ಬೆಲೆಯಲ್ಲೂ ಇಳಿಕೆ ಆಗುವಂಥ ಸಂತಸದ ಸುದ್ದಿ ಹೊರಬಿದ್ದಿದೆ.
ಇಂಥದ್ದೊಂದು ಸಿಹಿಸುದ್ದಿಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದಾರೆ. ಕೇಂದ್ರ ಅಬಕಾರಿ ಸುಂಕವನ್ನು ಪೆಟ್ರೋಲ್​ ಮೇಲೆ ಲೀಟರ್​ಗೆ 8 ರೂಪಾಯಿ ಮತ್ತು ಡೀಸೆಲ್​ ಮೇಲೆ ಲೀಟರ್​ಗೆ 6 ರೂಪಾಯಿ ಇಳಿಸಲಿದ್ದೇವೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ ಲೀಟರ್​ಗೆ 9.5 ರೂ. ಮತ್ತು ಡೀಸೆಲ್​ ಬೆಲೆಯಲ್ಲಿ ಲೀಟರ್​ಗೆ 7 ರೂ. ಇಳಿಕೆ ಆಗಲಿದೆ ಎಂದು ಅವರು ಹೇಳಿದ್ದಾರೆ.
ಅಷ್ಟೇ ಅಲ್ಲದೆ ಈ ವರ್ಷದಲ್ಲಿ ಅಡುಗೆ ಅನಿಲ ಸಿಲಿಂಡರ್​ಗೆ 200 ರೂ. ಸಹಾಯಧನ ನೀಡುವುದಾಗಿಯೂ ಅವರು ಹೇಳಿದ್ದಾರೆ. ವರ್ಷಕ್ಕೆ 12 ಸಿಲಿಂಡರ್​ವರೆಗೆ ಇದನ್ನು ನೀಡಲಿದ್ದು, ಇದರಿಂದ ಪ್ರಧಾನಮಂತ್ರಿ ಉಜ್ವಲಾ ಯೋಜನೆಯ 9 ಕೋಟಿ ಫಲಾನುಭವಿಗಳಿಗೆ ಅನುಕೂಲ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಅಶಿಸ್ತಿನ ಪಕ್ಷ, ಅಲ್ಲಿ ಮುಂದಿನ ಚುನಾವಣೆಗೂ ಮುನ್ನ ಆಗಲಿದೆ ದೊಡ್ಡ ಸ್ಫೋಟ: ಪ್ರಮೋದ್ ಮಧ್ವರಾಜ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − one =
Remember me
