ನವದೆಹಲಿ:ಅಪ್ರಾಪ್ತ ವಯಸ್ಕಳನ್ನು ಮನೆ ಕೆಲಸಕ್ಕೆಂದು ನೇಮಿಸಿಕೊಂಡು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಮಹಿಳಾ ಪೈಲಟ್​ ಹಾಗೂ ಆಕೆಯ ಪತಿಯನ್ನು ಗುಂಪೊಂದು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ದೆಹಲಿಯ ದ್ವಾರಕಾ ನಗರದಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯರ ಗುಂಪೊಂದು ಮಹಿಳಾ ಪೈಲಟ್ ಹಾಗೂ ಆಕೆಯ ಪತಿಯನ್ನು ಹಿಡಿದು ಥಳಿಸುತ್ತಿರುವುದು ಕಂಡು ಬರುತ್ತದೆ. ಆಕೆ ಕ್ಷಮೆ ಕೇಳಿದರು ಸಹ ಗುಂಪು ಹಲ್ಲೆ ಮಾಡುವುದನ್ನು ಮುಂದುವರೆಸುತ್ತದೆ.
#WATCH| A woman pilot and her husband, also an airline staff, were thrashed by a mob in Delhi's Dwarka for allegedly employing a 10-year-old girl as a domestic help and torturing her.The girl has been medically examined. Case registered u/s 323,324,342 IPC and Child Labour…pic.twitter.com/qlpH0HuO0z
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ದಂಪತಿಗಳಿಬ್ಬರು ಎರಡು ತಿಂಗಳ ಹಿಂದೆ ಅಪ್ರಾಪ್ತ ವಯಸ್ಕಳನ್ನು ಮನೆಕೆಲಸಕ್ಕೆಂದು ನೇಮಿಸಿದ್ದರು. ಇತ್ತೀಚಿಗೆ ಬಾಲಕಿಯ ಸಂಬಂಧಿಕರೊಬ್ಬರು ಭೇಟಿ ಮಾಡಿದಾಗ ಆಕೆಯ ಮೈಮೇಲೆ ಗಾಯದ ಗುರುತು ಹಾಗೂ ಸುಟ್ಟ ಕಲೆಗಳು ಪತ್ತೆಯಾಗಿದ್ದವು.
ಈ ಬಗ್ಗೆ ವಿಚಾರಿಸಿದಾಗ ಬಾಲಕಿ ಸರಿಯಾದ ಉತ್ತರವನ್ನು ನೀಡದೆ ಹೊರಟು ಹೋಗಿದ್ದಾಳೆ. ಇದರಿಂದ ಅನುಮಾನಗೊಂಡ ಬಾಲಕಿಯ ಸಂಬಂಧಿ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರಿಗೆ ನಡೆದ ಘಟನೆ ಕುರಿತು ವಿವರಿಸಿದ್ದಾಳೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯ ನಿವಾಸಿಗಳು ಪೈಲಟ್​ ದಂಪತಿಗಳನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಪ್ರಕರಣ ಸಂಬಂಧ ಅಪ್ರಾಪ್ತ ವಯಸ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದಂಪತಿಗಳಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
