ತಮಿಳುನಾಡು:ಬಟ್ಟೆ ಅಂಗಡಿಯ ಟ್ರಯಲ್ ರೂಂನಲ್ಲಿ ಕ್ಯಾಮೆರಾ ಅಳವಡಿಸಿದ್ದ ಮಹಿಳೆ ಮತ್ತು ಆಕೆಯ ಸಹಚರರನ್ನು ಇದೀಗ ತಮಿಳುನಾಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಉಪ್ಪಿನ ಕಣಕ್ಕಿಂತಲೂ ಚಿಕ್ಕದಾದ ಬ್ಯಾಗ್ 52 ಲಕ್ಷ ರೂ.ಗೆ ಹರಾಜು..!
ಜಿಲ್ಲೆಯ ತಿರುಕೋಯಿಲೂರಿನಲ್ಲಿರುವ ಜನಪ್ರಿಯ ಬಟ್ಟೆ ಅಂಗಡಿಯ ಟ್ರಯಲ್ ರೂಂನಲ್ಲಿ ಮೊಬೈಲ್ ಫೋನ್ ಕ್ಯಾಮೆರಾ ಇರಿಸಿದ್ದಕ್ಕಾಗಿ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ತಮಿಳುನಾಡು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.
ಘಟನೆಯ ವಿವರ:ಜೂನ್ 26 ರಂದು ಗ್ರಾಹಕರೊಬ್ಬರು ಬಟ್ಟೆ ಅಂಗಡಿಗೆ ಹೋಗಿದ್ದ ವೇಳೆ ತಮಗೆ ಸರಿಯಾದ ಅಳತೆ ಹೊಂದುವ ಶರ್ಟ್​​ ಅನ್ನು ಧರಿಸಲು  ಟ್ರಯಲ್ ರೊಂಗೆ ಹೋಗಿದ್ದಾರೆ. ಈ ವೇಳೆ ರೂಮ್‌ನಲ್ಲಿ ಮೊಬೈಲ್ ಫೋನ್ ಕ್ಯಾಮೆರಾ ಇರುವುದು ಅವರ ಕಣ್ಣಿಗೆ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಗ್ರಾಹಕ ಈ ಬಗ್ಗೆ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವೃದ್ಧ; ಕೃತ್ಯ ಚಿತ್ರೀಕರಿಸಿದ ಮಗ
ಈ ಘಟನೆ ಬಗ್ಗೆ ಬಟ್ಟೆ ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಇಬ್ಬರು ವ್ಯಕ್ತಿಗಳು ಟ್ರಯಲ್ ರೂಂನೊಳಗೆ ಮೊಬೈಲ್ ಕ್ಯಾಮೆರಾವನ್ನು ಇಟ್ಟು ಆಪರೇಟ್ ಮಾಡಿರುವುದು ತಿಳಿದುಬಂದಿದೆ. ತಕ್ಷಣವೇ ಓರ್ವ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಪರಾಧಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಈ ಕೆಲಸ ಮಾಡಲು ಸಹಕರಿಸಿದ ತನ್ನ ಸಹೋದರಿಯ ಬಗ್ಗೆಯೂ ಮಾಹಿತಿ ನೀಡಿದ್ದಾನೆ. ಶೀಘ್ರವೇ ಪೊಲೀಸರು  ಮಹಿಳೆಯೊಂದಿಗೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + six =
Remember me
