ನವದೆಹಲಿ:ಕೋವಿಡ್​ 19 ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ಹೆಚ್ಚು ಪರಿಣಾಮಕಾರಿಯಾಗಿದೆ ಎಂಬ ನಂಬಿಕೆ ಇತ್ತಿಚೆಗೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕರೊನಾ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡವರಿಂದ ಪ್ಲಾಸ್ಮಾ ಸಂಗ್ರಹಿಸಲಾಗುತ್ತಿದೆ. ಆದರೆ ಈ ಥೆರಪಿ ಕೋವಿಡ್​ 19 ಚಿಕಿತ್ಸೆಯಲ್ಲಿ ಸಂಪೂರ್ಣ ಪರಿಣಾಮಕಾರಿ ಎಂಬುದು ಇನ್ನೂ ದೃಢಪಟ್ಟಿಲ್ಲ. ಸದ್ಯ ಇದು ಪ್ರಾಯೋಗಿಕ ಹಂತದಲ್ಲಿ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಸ್ಪಷ್ಟಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್​ವಾಲ್​, ಕೋವಿಡ್​ 19 ಚಿಕಿತ್ಸೆಗಾಗಿ ಯಾವುದೇ ವಿಶಿಷ್ಠ ಥೆರಪಿಗಳು ಇನ್ನೂ ಬಂದಿಲ್ಲ. ಇದರ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿಯನ್ನು ಬಳಸಬಹುದು ಎಂಬುದಕ್ಕೆ ಹೆಚ್ಚಿನ ವೈಜ್ಞಾನಿಕ ಆಧಾರಗಳಿಲ್ಲ ಎಂದು ಹೇಳಿದರು.
ಸದ್ಯ ಕೋವಿಡ್​ 19 ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ಎಷ್ಟು ಪರಿಣಾಮಕಾರಿ ಎಂಬ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್​) ಅಧ್ಯಯನ ನಡೆಸುತ್ತಿದೆ ಎಂದು ತಿಳಿಸಿದರು.
ಐಸಿಎಂಆರ್​ನ ಅಧ್ಯಯನ ಮುಗಿದು, ಕೋವಿಡ್​ 19 ಚಿಕಿತ್ಸೆಯಲ್ಲಿ ಅದರ ಔಚಿತ್ಯ ಸಾಬೀತಾಗುವವರೆಗೆ ಪ್ಲಾಸ್ಮಾ ಥೆರಪಿಯನ್ನು ಪ್ರಾಯೋಗಿಕವಾಗಿ ಬಳಸುವುದನ್ನು ಮುಂದುವರಿಸಲಾಗುವುದು. ಸೂಕ್ತ ವೈದ್ಯಕೀಯ ಮಾರ್ಗದರ್ಶನದಲ್ಲಿ, ಸಮರ್ಪಕ ರೀತಿಯಲ್ಲಿ ಪ್ಲಾಸ್ಮಾ ಥೆರಪಿಯನ್ನು ಬಳಸದಿದ್ದರೆ ಅದು ರೋಗಿಯ ಜೀವಕ್ಕೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು ವಿವರಿಸಿದರು.
20 ದಿನಗಳಲ್ಲಿ ಸಾವಿರಾರು ವೆಂಟಿಲೇಟರ್​ ತಯಾರಿ, ಕೋವಿಡ್​ 19 ವಿರುದ್ಧ ಹೋರಾಟದಲ್ಲಿ ದೇಶದ ಕಾರು ತಯಾರಿಕಾ ಕಂಪನಿಗಳ ಕೊಡುಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
