ನವದೆಹಲಿ:ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿರುವ ಗೃಹಸಚಿವ ಅಮಿತ್​ ಷಾ, ಪ್ರತಿಪಕ್ಷವು ಕರೊನಾ ವೈರಸ್​ ವಿಚಾರದಲ್ಲಿ ಚಿಲ್ಲರೆ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಟ್ವೀಟ್​ ಮೂಲಕ ಕಿಡಿಕಾರಿರುವ ಅಮಿತ್​ ಷಾ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಅಡಿಯಲ್ಲಿ ಕರೊನಾ ವೈರಸ್​ ತಡೆಗಟ್ಟಲು ಇಡೀ ಭಾರತ ಹೋರಾಡುತ್ತಿದೆ. ಜಾಗತಿಕ ಹಾಗೂ ದೇಶೀಯವಾಗಿ ಇದಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ. ಕೋವಿಡ್​ 19 ಮಣಿಸಲು 130 ಕೋಟಿ ಭಾರತೀಯರು ಒಗ್ಗೂಡಿದ್ದಾರೆ. ಆದರೆ, ಕಾಂಗ್ರೆಸ್​ ಚಿಲ್ಲರೆ ರಾಜಕೀಯ ಮಾಡುತ್ತಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಅವರು ದೇಶದ ಹಿತಾಸಕ್ತಿ ಬಗ್ಗೆ ಚಿಂತಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸಲಿ ಎಂದು ಸಲಹೆ ನೀಡಿದ್ದಾರೆ.
ಇದಕ್ಕೂ ಮುನ್ನ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯಲ್ಲಿ 21 ದಿನಗಳ ಲಾಕ್​ಡೌನ್​ ಅನ್ನು ಟೀಕಿಸಲಾಯಿತು. ಯಾವುದೇ ಯೋಜನೆಯಿಲ್ಲದೇ ಪ್ರಧಾನಿ ಮೋದಿ ಸರ್ಕಾರ ಲಾಕ್​ಡೌನ್​ ಅನುಷ್ಠಾನಕ್ಕೆ ತಂದಿದೆ. ಹಳ್ಳಿಯಿಂದ ಬಂದು ದೊಡ್ಡ ದೊಡ್ಡ ನಗರಗಳಲ್ಲಿ ದಿನಗೂಲಿ ಮಾಡುತ್ತಿದ್ದವರ ಮೇಲೆ ತುಂಬಾ ಪರಿಣಾಮ ಬೀರಿದೆ ಎಂದು ಕಿಡಿಕಾರಿದ ಬೆನ್ನಲ್ಲೇ ಷಾ ಟ್ವೀಟ್ ಮೂಲಕ ಕಾಂಗ್ರೆಸ್​ ವಿರುದ್ಧ ಗುಡುಗಿದ್ದಾರೆ.​
ಇಡೀ ರಾಷ್ಟ್ರ ಹಾಗೂ ಸರ್ಕಾರ ಬಡವರು ಮತ್ತು ವಲಸಿಗರ ಪರವಾಗಿ ಒಟ್ಟಿಗೆ ನಿಲ್ಲುವಂತೆ ಒತ್ತಾಯಿಸಿದ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಂಬರುವ ಕಷ್ಟದ ದಿನಗಳಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಕೊಡಬೇಕಿದೆ ಎಂದರು.
ಇದೇ ವೇಳೆ ವಲಸಿಗರ ಬಿಕ್ಕಟ್ಟಿನ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ ರಾಹುಲ್​ ಗಾಂಧಿ, ನಿರ್ದಿಷ್ಟ ತಂತ್ರದೊಂದಿಗೆ ಭಾರತವನ್ನು ಅಭಿವೃದ್ಧಿ ಪಡಿಸಿ ಎಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದರು. ಅಲ್ಲದೆ, ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಬಡವರಿಗೆ ನೆರವಾಗಲು ಕರೆ ನೀಡಿದರು.(ಏಜೆನ್ಸೀಸ್​)
ನಿಮ್ಮ ಸಮೀಪದಲ್ಲಿರೋ ಕರೊನಾ ಸೋಂಕಿತನ ಬಗ್ಗೆ ಎಚ್ಚರಿಸಲಿದೆ ಕೇಂದ್ರ ಸರ್ಕಾರದ ನೂತನ ‘ಆರೋಗ್ಯ ಸೇತು’ ಆ್ಯಪ್​!

ಲಾಕ್​ಡೌನ್​ನಿಂದ ಬಡವರಿಗೆ ತೀವ್ರ ಸಂಕಷ್ಟಕ್ಕೆ ಪ್ರಧಾನಿ ಮೋದಿ ಸ್ಪಂದನೆ, ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 15 =
Remember me
