ನವದೆಹಲಿ:ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಅಫ್ಘಾನಿಸ್ತಾನ ಕ್ರಿಕೆಟಿಗ ರಶೀದ್ ಖಾನ್‌ಗೆ ಭಾರಿ ಬಹುಮಾನ ಘೋಷಿಸಿದ್ದಾರೆ ಎಂಬ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಈ ಕುರಿತಾಗಿ ರತನ್ ಟಾಟಾ ಅವರು ಟ್ವೀಟ್​​ ಮಾಡಿ ಕೆಲವು ವದಂತಿಗೆ ಪುಲ್​ ಸ್ಟಾಪ್​​ ಇಟ್ಟಿದ್ದಾರೆ.
ವೈರಲ್ ಆಗಿರುವ ಸುದ್ದಿಯಲ್ಲಿ ಏನಿದೆ?:ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ಪಾಕಿಸ್ತಾನವನ್ನು 8 ವಿಕೆಟ್‌ಗಳಿಂದ ಸೋಲಿಸಿದೆ. ಈ ಪಂದ್ಯದ ನಂತರ ಅಫ್ಘಾನ್ ಕ್ರಿಕೆಟಿಗರು ವಿಜಯೋತ್ಸವ ಆಚರಿಸಿದರು. ಈ ವೇಳೆ ರಶೀದ್ ಖಾನ್ ಭಾರತದ ಧ್ವಜವನ್ನು ಹಿಡಿದುಕೊಂಡಿರುವುದು ಕಂಡುಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ರಶೀದ್‌ಗೆ 55 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ವಿಷಯ ತಿಳಿದ ರತನ್ ಟಾಟಾ ರಶೀದ್ ಖಾನ್ ಗೆ ತಕ್ಷಣವೇ 10 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟಿಗ ರಶೀದ್ ಖಾನ್‌ಗೆ 10 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿಗಳು ಹರಿದಾಡಿದ್ದವು. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ.
ರತನ್ ಟಾಟಾ ಟ್ವೀಟ್ :ಯಾವುದೇ ಆಟಗಾರನಿಗೆ ಬಹುಮಾನ ಘೋಷಿಸಿಲ್ಲ. ಕ್ರಿಕೆಟ್‌ ಆಟಗಾರರಿಗೆ, ಐಸಿಸಿಗೆ (ICC) ಯಾವುದೇ ಸಲಹೆ ನೀಡಿಲ್ಲ. ಕ್ರಿಕೆಟ್‌ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅವರಿಂದ ಅಧಿಕೃತ ಮಾಹಿತಿ ನನ್ನಿಂದ ಬರದ ಹೊರತು ದಯವಿಟ್ಟು ನಂಬಬೇಡಿ. ಇಂತಹ ಫಾರ್ವರ್ಡ್ ಸಂದೇಶಗಳನ್ನು ನಂಬಬೇಡಿ ಎಂದು ಸಲಹೆ ನೀಡಿ ರತನ್ ಟಾಟಾ ಟ್ವೀಟ್ ಮಾಡಿದ್ದಾರೆ.
I have made no suggestions to the ICC or any cricket faculty about any cricket member regarding a fine or reward to any players.
I have no connection to cricket whatsoever
Please do not believe WhatsApp forwards and videos of such nature unless they come from my official…
— Ratan N. Tata (@RNTata2000)October 30, 2023

ಏಕದಿನ ವಿಶ್ವಕಪ್‌ನ ಅಂಗವಾಗಿ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳು ಅಕ್ಟೋಬರ್ 23 ರಂದು ಚೆನ್ನೈ ಮೈದಾನದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಏಳು ವಿಕೆಟ್ ನಷ್ಟಕ್ಕೆ 282 ರನ್ ಗಳಿಸಿತ್ತು. ನಾಯಕ ಬಾಬರ್ ಅಜಮ್ 74 ರನ್ ಮತ್ತು ಆರಂಭಿಕ ಅಬ್ದುಲ್ಲಾ ಶಫೀಕ್ 58 ರನ್ ಗಳಿಸಿದರು. ಬಳಿಕ ಅಫ್ಘಾನಿಸ್ತಾನ 49 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.
ಮದುವೆಯಾದ 12 ಗಂಟೆಯೊಳಗೆ ವರನಿಗೆ ತ್ರಿವಳಿ ತಲಾಖ್ ನೀಡಿದ ವಧು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
