ಭೋಪಾಲ್​:ತಮ್ಮ ತಾಯಿ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಪುಟ್ಟ ಬಾಲಕಿಯರಿಬ್ಬರು ಪೊಲೀಸ್​ ಠಾಣೆಯ ಮೆಟ್ಟಿಲೇರಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ.
ಪೊಲೀಸರು ಎಂದಿನಂತೆ ತಮ್ಮ ಕೆಲಸದಲ್ಲಿ ತೊಡಗಿದ್ದ ವೇಳೆ ಠಾಣೆಗೆ ಬಂದ ಪುಟ್ಟ ಬಾಲಕಿಯರು ತಮ್ಮ ತಂದೆಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಭಿತರ್‌ವಾರ್ ಪೊಲೀಸ್ ಠಾಣೆಗೆ ಆಗಮಿಸಿದ ಬಾಲಕಿಯರು ತಮ್ಮ ತಾಯಿ ಮೇಲೆ ತಂದೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಮನೆಯಲ್ಲಿ ನಡೆಯುತ್ತಿದ್ದ ಘಟನೆಗಳನ್ನು ಠಾಣಾಧಿಕಾರಿ ಪ್ರದೀಪ್ ಶರ್ಮಾ ಅವರಿಗೆ ವಿವರಿಸಿದ್ದಾರೆ.
ಇದನ್ನೂ ಓದಿ:ಉಚಿತ ಥಾಲಿಯ ಆಸೆಗೆ ಬಿದ್ದ ಮಹಿಳೆಗೆ 90,000 ರೂ. ವಂಚನೆ!
ಮಕ್ಕಳ ಬಳಿ ಅಹವಾಲು ಆಲಿಸಿದ ಬಳಿಕ ಅವರ ಮನೆಗೆ ಭೇಟಿ ನೀಡಿದ ಪೊಲೀಸ್​ ಅಧಿಕಾರಿಗಳು ಪೋಷಕರಿಗೆ ಬುದ್ದಿವಾದ ಹೇಳಿದ್ದಾರೆ. ಈ ರೀತಿ ಜಗಳವಾಡುವುದರಿಧಂ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ದಂಪತಿಗಳಿಗೆ ಮನವರಿಕೆ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಭಿತರ್‌ವಾರ್ ಠಾಣಾಧಿಕಾರಿ ಪ್ರದೀಪ್ ಶರ್ಮಾ ತಮ್ಮ ತಾಯಿ ಮೇಲೆ ತಂದೆ ಹಲ್ಲೆ ನಡೆಸುತ್ತಾರೆ ಎಂದು ದುರು ನೀಡಲು ಇಬ್ಬರು ಬಾಲಕಿಯರು ಠಾಣೆಗೆ ಆಗಮಿಸಿದ್ದರು. ಅವರ ಕಥೆಯನ್ನು ಕೇಳಿ ನಂತರ ಅವರ ಮನೆಗೆ ಹೋಗಿ ಪೋಷಕರನ್ನು ಭೇಟಿ ಮಾಡಿ ಮಕ್ಕಳ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದಾದ್ದರಿಂದ ತಮ್ಮ ತಮ್ಮಲ್ಲೇ ಜಗಳವಾಡಬೇಡಿ ಎಂದು ಬುದ್ದಿವಾದ ಹೇಳಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:one × 2 =
Remember me
