ನವದೆಹಲಿ:ಲಡಾಖ್​ನಲ್ಲಿ ಚೀನಾದೊಂದಿಗೆ ಸಂಭವಿಸಿದ ಘರ್ಷಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ(ಜೂ.19) ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಶುಕ್ರವಾರ ಸಂಜೆ 5ಕ್ಕೆ ನಡೆಯುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲಾಗುತ್ತದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.ಇದನ್ನೂ ಓದಿರಿಚೀನಾ ಕಂಪನಿಗಳನ್ನು ನಿಷೇಧಿಸಲು ಆರ್​ಎಸ್​ಎಸ್​ನ ಸ್ವದೇಶಿ ಜಾಗರಣ ಮಂಚ್ ಆಗ್ರಹ
ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರಶ್ನೆ ಮಾಡುತ್ತಿರುವ ಪ್ರತಿ ಪಕ್ಷಗಳಿಗೂ ಆ ದಿನ ಪ್ರಧಾನಿ ಮೋದಿ ಅವರಿಂದ ಉತ್ತರ ಸಿಗಬಹುದು. ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾದ 45 ಸೈನಿಕರಿಗೆ ಸಾವು-ನೋವು ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೆ ಚೀನಾ ಯೋಧರ ಸಾವಿನ ಬಗ್ಗೆ ಅಲ್ಲಿನ ಮಾಧ್ಯಮಗಳಲ್ಲಿ ವರದಿ ಆಗಿಲ್ಲ.
In order to discuss the situation in the India-China border areas, Prime Minister@narendramodihas called for an all-party meeting at 5 PM on 19th June. Presidents of various political parties would take part in this virtual meeting.
— PMO India (@PMOIndia)June 17, 2020

ಪದೇಪದೆ ಕ್ಯಾತೆ ತೆಗೆದು ಸಂಘರ್ಷಕ್ಕೆ ಬರುವ ಚೀನಾ, ಇದೀಗ ಭಾರತದ ಜತೆ ಮತ್ತಷ್ಟು ಸಂಘರ್ಷ ಬಯಸುವುದಿಲ್ಲ ಎನ್ನುವ ಮೂಲಕ ನಾಟಕ ಶುರು ಮಾಡಿದೆ.
ಚೀನಾದ ಸಂಘರ್ಷ ಜತೆಗೆ ಕೋವಿಡ್‌19 ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೂ.19ರಂದು ಪ್ರಧಾನಿ ಮೋದಿ ನಡೆಸುತ್ತಿರುವ ಸಭೆ ಭಾರೀ ಮಹತ್ವ ಪಡೆದಿದೆ.
ಇದನ್ನೂ ಓದಿರಿಭಾರತ-ಚೀನಾ ಬಿಕ್ಕಟ್ಟು: ಕುತೂಹಲ ಮೂಡಿಸಿದ ಪ್ರಧಾನಿ ಮೋದಿಯವರ ನಡೆ…ಜೂ.19ರವರೆಗೆ ಕಾಯಬೇಕು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 7 =
Remember me
