ನವದೆಹಲಿ:ಕಳೆದ ಡಿಸೆಂಬರ್​ 13ರಂದು ದೇಶದ ಇತಿಹಾಸದಲ್ಲಿ ನಡೆದ ಅಂತ್ಯಂತ ಭೀಕರ ಘಟನೆಗೆ 22 ವರ್ಷಗಳು ತುಂಬಿತು. ಯಾವುದು ಘಟನೆ ಅಂದರೆ, 2001ರ ಡಿ.13ರಂದು ಸಂಸತ್​ ಭವನದ ಮೇಲೆ ಉಗ್ರರ ದಾಳಿ ನಡೆದಿತ್ತು. ವಿಪರ್ಯಾಸ ಏನೆಂದರೆ, ಅದೇ ದಿನ ಇಡೀ ದೇಶ ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಗಿದೆ. ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್​ ಭವನದಲ್ಲಿ ಡಿ.13ರಂದು ಭಾರಿ ಭದ್ರತಾ ಲೋಪ ನಡೆದಿದ್ದು ನಿಮಗೆಲ್ಲ ಗೊತ್ತೇ ಇದೆ. ಇದೀಗ ಘಟನೆಯ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
ಭದ್ರತಾ ಲೋಪವನ್ನು ಪ್ರಧಾನಿ ಮೋದಿ ಅವರು “ದುರಾದೃಷ್ಟಕರ” ಮತ್ತು “ಚಿಂತಾಜನಕ” ಎಂದು ಕರೆದಿದ್ದು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಅತ್ಯಂತ ಗಂಭೀರತೆಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಮತ್ತು ಈ ಘಟನೆಯ ಗಂಭೀರತೆಯನ್ನು ನಿರ್ಲಕ್ಷಿಸುವಂತಿಲ್ಲ ಎಂದು ದೈನಿಕ್ ಜಾಗರಣ್ ಪ್ರಕಟಿಸಿರುವ ಲೇಖನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.
ತನಿಖಾ ಸಂಸ್ಥೆಗಳು ಸಂಪೂರ್ಣ ತನಿಖೆ ನಡೆಸುತ್ತಿವೆ. ಈ ಘಟನೆಯ ಹಿಂದಿರುವ ಅಂಶಗಳು, ಯೋಜನೆಗಳೇನು ಎಂಬುದನ್ನು ತಿಳಿದು, ಅದಕ್ಕೆ ಪರಿಹಾರ ಕಂಡುಕೊಳ್ಳುವುದು ಅಷ್ಟೇ ಮುಖ್ಯ. ಮುಕ್ತ ಮನಸ್ಸಿನಿಂದ ಪರಿಹಾರಗಳ ಹುಡುಕಾಟವೂ ನಡೆಯಬೇಕು. ಪ್ರತಿಯೊಬ್ಬರೂ ಇಂತಹ ವಿಷಯಗಳಲ್ಲಿ ವಿವಾದ ಹುಟ್ಟುಹಾಕುವುದರಿಂದ ದೂರವಿರಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.
ಆರೋಪಿಗಳ ಉದ್ದೇಶ ಏನಿತ್ತು?ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಎಲ್ಲರನ್ನೂ ಏಳು ದಿನಗಳ ಪೊಲೀಸ್​ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ಸರ್ಕಾರಕ್ಕೆ ತಮ್ಮ ಸಂದೇಶ ರವಾನಿಸಲು, ಆಡಳಿತದ ಮೇಲೆ ಪ್ರಭಾವ ಬೀರುವ ಕೆಲವು ಮಾರ್ಗಗಳ ಬಗ್ಗೆ ಐವರು ಆರೋಪಿಗಳು ಚರ್ಚೆ ನಡೆಸಿದ್ದರು. ತಮ್ಮ ದೇಹವನ್ನು ಅಗ್ನಿಶಾಮಕ ಜೆಲ್​ನಿಂದ ಲೇಪಿಸಿಕೊಂಡು ಸದನದಲ್ಲೇ ಬೆಂಕಿ ಹಚ್ಚಿಕೊಳ್ಳುವ ಬಗ್ಗೆ ಯೋಜನೆ ರೂಪಿಸಿದ್ದರು. ಆದರೆ ಭದ್ರತಾ ಕಾರಣ ಮತ್ತು ಹಣದ ಕೊರತೆಯಿಂದ ಇದು ಅಸಾಧ್ಯ ಎಂಬ ಕಾರಣಕ್ಕೆ ಕೈಬಿಟ್ಟಿದ್ದರು. ಸಂಸತ್ತಿನ ಒಳಗೆ ಕರಪತ್ರಗಳನ್ನು ಹಂಚುವ ಬಗ್ಗೆಯೂ ಅವರು ಯೋಚಿಸಿದ್ದರು. ಆದರೆ ಅಂತಿಮವಾಗಿ ಅವರು ಕಲರ್ ಸ್ಪ್ರೇ ಮಾಡುವ ನಿರ್ಧಾರ ಕೈಕೊಂಡಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ನಡೆದಿದ್ದೇನು?ಬಂಧಿತ 6 ಮಂದಿಯಲ್ಲಿ ಸಾಗರ್​ ಶರ್ಮ ಮತ್ತು ಮನೋರಂಜನ್​ ಡಿಸೆಂಬರ್​ 13ರಂದು ಹಳದಿ ಬಣ್ಣ ಹೊರ ಸೂಸುವ ಹೊಗೆ ಡಬ್ಬಿ ಅಥವಾ ಕ್ಯಾನಿಸ್ಟರ್​ಗಳನ್ನು ಸಿಡಿಸಿ, ಸಂಸತ್ತಿನ ಒಳಗೆ ಗದ್ದಲ ಉಂಟು ಮಾಡುವ ಮೂಲಕ ಆತಂಕವನ್ನು ಸೃಷ್ಟಿಸಿದರು. ಅದೇ ಸಮಯದಲ್ಲಿ ಇನ್ನಿಬ್ಬರು ಆರೋಪಿಗಳಾದ ನೀಲಂ ದೇವಿ ಮತ್ತು ಅಮೋಲ್​ ಶಿಂಧೆ ಸಂಸತ್ತಿನ ಹೊರಭಾಗದಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಕ್ಯಾನಿಸ್ಟರ್​ಗಳನ್ನು ಸ್ಫೋಟಿಸಿ, ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಇನ್ನು ಈ ಪ್ರಕರಣದ ಮಾಸ್ಟರ್​ ಮೈಂಡ್​ ಲಲಿತ್ ಝಾ ಮತ್ತು ವಿಕ್ಕಿ ಶರ್ಮ ಎಂಬುವರನ್ನು ಬಂಧಿಸಲಾಗಿದೆ.
ಮೊಬೈಲ್​, ಬಟ್ಟೆಗಳು ಪತ್ತೆಇಂದು (ಡಿ.17) ಬೆಳಗ್ಗೆ ಪೊಲೀಸರು, ಆರೋಪಿಗಳಿಗೆ ಸಂಬಂಧಿಸಿದ ಸುಟ್ಟ ಸ್ಥಿತಿಯಲ್ಲಿದ್ದ ಮೊಬೈಲ್​ ಫೋನ್​ಗಳ ಬಿಡಿ ಭಾಗಗಳು, ಬಟ್ಟೆಗಳು ಮತ್ತು ಶೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಲ್ಲ ಫೋನ್​ಗಳು ಕೂಡ ಪ್ರಕರಣದ ಮಾಸ್ಟರ್​ ಮೈಂಡ್​ ಲಲಿತ್​ ಝಾ ಬಳಿ ಇತ್ತು ಎಂದು ತಿಳಿದುಬಂದಿದೆ. ಎಲ್ಲ ಫೋನ್​ಗಳನ್ನು ಮುರಿದು ಹಾಕಿದ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ. ಎಲ್ಲವೂ ರಾಜಸ್ಥಾನದಲ್ಲಿ ಪತ್ತೆಯಾಗಿವೆ.
ತನಿಖಾ ಸಮಿತಿ ರಚನೆಸಂಸತ್ತಿನ ಸಂಕೀರ್ಣದಲ್ಲಿ ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸಲು ಉನ್ನತ ಅಧಿಕಾರ ಸಮಿತಿ ರಚನೆ ಮಾಡಲಾಗಿದೆ. ಡಿ. 13ರ ಘಟನೆ ಪುನರಾವರ್ತನೆಯಾಗದಂತೆ ಖಚಿತಪಡಿಸಿಕೊಳ್ಳಲು ಕ್ರಿಯಾ ಯೋಜನೆಯನ್ನು ರೂಪಿಸಲಾಗುತ್ತಿದೆ. ಉನ್ನತ ಮಟ್ಟದ ತನಿಖಾ ಸಮಿತಿಯ ವರದಿಯನ್ನು ಸದ್ಯದಲ್ಲೇ ಸಂಸತ್​ನಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.(ಏಜೆನ್ಸೀಸ್​)
ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಆರೋಪಿಗಳ ಮೊಬೈಲ್​ ಫೋನ್​ಗಳು ರಾಜಸ್ಥಾನದಲ್ಲಿ ಪತ್ತೆ!

ಇಂಜಿನಿಯರ್​, ಡ್ರೈವರ್​, ಸೇನಾ ಆಕಾಂಕ್ಷಿ: ವಿಚಾರಣೆ ವೇಳೆ ಆರೋಪಿಗಳು ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
