ಜೈಪುರ:ರಾಜಸ್ಥಾನದಲ್ಲಿ 7,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ರಾಜಸ್ತಾನದ ಈ ‘ತ್ರಿಶಕ್ತಿ’ ದೇಶದ ಬಲವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ವಿಡಿಯೋ ಚಿತ್ರೀಕರಿಸಬೇಡಿ ಎಂದಿದ್ದೇ ಪೊಲೀಸ್​ ಅಧಿಕಾರಿ ಪಾಲಿಗೆ ಮುಳುವಾಯ್ತು; ಮಹಿಳೆ ಸೇರಿದಂತೆ ಒಂಬತ್ತು ಮಂದಿ ಅರೆಸ್ಟ್
ಚಿತ್ತೋರ್‌ಗಢದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ರಾಜ್ಯದಲ್ಲಿ ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಸುಮಾರು 7,000 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಇಂದು ಮೀಸಲಾದ ವಿವಿಧ ಅಭಿವೃದ್ಧಿ ಯೋಜನೆಗಳು ಜನರ ಜೀವನವನ್ನು ಸುಲಭಗೊಳಿಸುತ್ತದೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದರು.
“ರಾಜಸ್ಥಾನದಲ್ಲಿ ಎಕ್ಸ್‌ಪ್ರೆಸ್‌ವೇಗಳು, ಹೆದ್ದಾರಿಗಳು ಮತ್ತು ರೈಲ್ವೇ ಸೇರಿದಂತೆ ಆಧುನಿಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಒತ್ತು ನೀಡಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಇದನ್ನೂ ಓದಿ:ಕೇವಲ 10 ಗಂಟೆಗಳಲ್ಲಿ ದೆಹಲಿಯಿಂದ ವಡೋದರಾಗೆ ಪ್ರಯಾಣ; ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಹಂತ-2 ಇಂದು ಉದ್ಘಾಟನೆ
ಪ್ರಧಾನಿಗಳು ಘೋಷಿಸಿದ ಯೋಜನೆಗಳಲ್ಲಿ ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ ನಾಥದ್ವಾರದಲ್ಲಿ (ರಾಜಸಮಂದ್) ಅಭಿವೃದ್ಧಿಪಡಿಸಿದ ಪ್ರವಾಸೋದ್ಯಮ ಸೌಲಭ್ಯಗಳು, ನಾಥದ್ವಾರದಲ್ಲಿ ಆಧುನಿಕ ‘ಪ್ರವಾಸೋದ್ಯಮ ವ್ಯಾಖ್ಯಾನ ಮತ್ತು ಸಾಂಸ್ಕೃತಿಕ ಕೇಂದ್ರ’, ಕೋಟಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (IIIT) ಖಾಯಂ ಕ್ಯಾಂಪಸ್ ಸೇರಿವೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
