ನವದೆಹಲಿ:ಆತ್ಮನಿರ್ಭರ ಭಾರತ ಅಭಿಯಾನ ಘೋಷಣೆಯಡಿ ಕಳೆದ ಮೇನಲ್ಲಿ ಪ್ರಕಟಿಸಿದ್ದ ಕೃಷಿ ಮೂಲಸೌಕರ್ಯ ನಿಧಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. 1 ಲಕ್ಷ ಕೋಟಿ ರೂ. ನಿಧಿಯೊಂದಿಗೆ ಆರಂಭವಾಗಿರುವ ಯೋಜನೆಯ ಮೊದಲ ಕಂತಿನಲ್ಲಿ 2,280 ರೈತರ ಸೊಸೈಟಿಗಳಿಗೆ ಒಂದು ಸಾವಿರ ಕೋಟಿ ರೂಪಾಯಿಗೂ ಹೆಚ್ಚಿನ ಸಾಲದ ನೆರವನ್ನು ಕಲ್ಪಿಸಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ಹೇಳಿಕೆ ತಿಳಿಸಿದೆ.
ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ಬೇಸಾಯಗಾರರು ಮತ್ತು ಕೃಷಿಕರ ಸೊಸೈಟಿಗಳು ಈ ನೆರವನ್ನು ಸದುದ್ದೇಶಕ್ಕೆ ಸಮರ್ಥವಾಗಿ ಬಳಸಿಕೊಳ್ಳುತ್ತವೆ ಎಂಬ ವಿಶ್ವಾಸ ಇದೆ. ಈ ನಿಧಿಯ ನೆರವಿನಿಂದ ರೈತರ ಆರ್ಥಿಕ ಸ್ಥಿತಿ ವೃದ್ಧಿಸುತ್ತದೆ. ತನ್ಮೂಲಕ ಕೃಷಿ ವಲಯ ಅಭಿವೃದ್ಧಿಯಾಗಿ ಭಾರತವು ಜಾಗತಿಕ ಮಟ್ಟದಲ್ಲಿ ಪೈಪೋಟಿ ನೀಡಲು ಸಾಧ್ಯವಾಗುತ್ತದೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ದೇಶದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.
ಯೋಜನೆಯ ಉದ್ದೇಶ
ಜೈಲುಪಾಲಾಗಿದ್ದರು ಇನ್ಫೋಸಿಸ್​ ನಾರಾಯಣ ಮೂರ್ತಿ; ವಿದೇಶದಲ್ಲಿ 5 ದಿನ ಅನ್ನಾಹಾರವಿಲ್ಲದೇ ಕಳೆದಿದ್ದರು….!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + eleven =
Remember me
