ನವದೆಹಲಿ:ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಕಾಂಗ್ರೆಸ್​ ಸದಸ್ಯರು ಕಪ್ಪು ಪತ್ರ ಬಿಡುಗಡೆ ಮಾಡಿರುವುದನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ ಅದನ್ನು ಕಾಲಾ ಟೀಕಾ ಎಂದು ಕರೆದಿದ್ದಾರೆ. ನಮ್ಮ ಸರ್ಕಾರ ಮಾಡುತ್ತಿರುವ ಒಳ್ಳೆಯ ಕೆಲಸಗಳನ್ನು ನೋಡಿ ಕಾಂಗ್ರೆಸ್​ ಸದಸ್ಯರು ದುಷ್ಟ ಕಣ್ಣುಗಳು ಬೀಳದೆ ಇರಲಿ ಎಂದು ಕಪ್ಪು ಕಾಗದ ಬಿಡುಗಡೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಪ್ರತಿಭಟನೆಯ ಸಂಕೇತವಾಗಿ ಸದನದಲ್ಲಿ ವಿರೋಧ ಪಕ್ಷದ ಸಂಸದರು ಕಪ್ಪು ನಿಲುವಂಗಿಯನ್ನು ಧರಿಸಿದ್ದಾರೆ. ಕೆಲವು ಸದಸ್ಯರು ಕಪ್ಪು ಬಟ್ಟೆಯಲ್ಲಿ ಬಂದಾಗ ನಾವು ರಾಜ್ಯಸಭೆಯಲ್ಲಿ ಫ್ಯಾಷನ್ ಪರೇಡ್ಅನ್ನು ಸಹ ನೋಡಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.
ನಿವೃತ್ತರಾಗಲಿರುವ ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶಕ್ಕೆ ಸಲ್ಲಿಸಿದ ಕೊಡುಗೆ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅವರಿಗಿರುವ ಬದ್ಧತೆಯನ್ನು ಶ್ಲಾಘಿಸಿದ್ದಾರೆ.
Prime Minister Narendra Modi speaks in Rajya Sabha during the farewell of retiring members.He says, "I want to remember Dr Manmohan Singh today, his contribution has been immense…For such a long time, the way he has guided this House & Country, Dr Manmohan Singh will always…pic.twitter.com/NC1e81sNRZ
ಇದನ್ನೂ ಓದಿ:ಲಾರಿ ಪಲ್ಟಿ; ಚಾಲಕ, ಕ್ಲೀನರ್​ ಸೇರಿದಂತೆ 40 ಜಾನುವಾರುಗಳು ಸಾವು
ನಾನು ಇಂದು ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸುತ್ತೇನೆ. ಅವರ ಕೊಡುಗೆ ಅಪಾರವಾಗಿದೆ. ಡಾ.ಮನಮೋಹನ್ ಸಿಂಗ್ ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ.
ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ವ್ಹೀಲ್‌ ಚೇರ್‌ನಲ್ಲಿ ಬಂದು ಮತ ಚಲಾಯಿಸಿದ್ದು ಕೂಡ ನನಗೆ ಚೆನ್ನಾಗಿ ನೆನಪಿದೆ. ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು. ಸದಸ್ಯರು ತಮ್ಮ ಕರ್ತವ್ಯಗಳ ಬಗ್ಗೆ ಎಚ್ಚರವಾಗಿರುವುದಕ್ಕೆ ಇದು ಒಂದು ಉತ್ತಮ ಉದಾಹರಣೆಯಾಗಿದೆ. ಅಲ್ಲದೇ ಮನಮೋಹನ್ ಸಿಂಗ್ ಎಲ್ಲ ಸಂಸದರಿಗೆ ಸ್ಫೂರ್ತಿ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
Prime Minister Narendra Modi says, "I remember in the other House, during the voting, it was known that the treasury bench would win but Dr Manmohan Singh came on his wheelchair & cast his vote. This an example of a member being alert of his duties"pic.twitter.com/sjSAusQoji
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 9 =
Remember me
