ನವದೆಹಲಿ:ದೆಹಲಿಯಲ್ಲಿರುವ ರಾಷ್ಟ್ರಪತಿ ಭವನಕ್ಕೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ಜತೆ ಚರ್ಚಿಸಿದ್ದಾರೆ. ಲಡಾಖ್‌ ಬಿಕ್ಕಟ್ಟಿನ ಈ ದಿನಗಳಲ್ಲಿ ಇಬ್ಬರು ಮಾತುಕತೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ರಾಷ್ಟ್ರಪತಿ ಹಾಗೂ ಪ್ರಧಾನಿಯವರು ಪ್ರಸಕ್ತ ವಿದ್ಯಮಾನಗಳು, ಭಾರತ-ಚೀನಾ ಗಡಿ ಭಾಗದಲ್ಲಿ ಸೇನೆ ನಿಲುಗಡೆ ಇತ್ಯಾದಿಗಳ ಬಗ್ಗೆ ವಿವರಣೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರಪತಿ ಭವನ, ಪ್ರಸ್ತುತ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿದ್ಯಮಾನಗಳ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಿದರು ಎಂದು ಹೇಳಿದೆ.
ಇದನ್ನೂ ಓದಿ:ಲಾಕ್‌ಡೌನ್ ಉಲ್ಲಂಘಿಸಿ, ಪ್ರವಾಸಿ ತಾಣಗಳಲ್ಲಿ ಸಂಚರಿಸಿದ ಸಚಿವ ಸಿ.ಟಿ. ರವಿ
ಕಳೆದ ಶುಕ್ರವಾರ ಲಡಾಖ್‌ಗೆ ಅಚ್ಚರಿಯ ಭೇಟಿ ನೀಡಿದ್ದ ಪ್ರಧಾನಿ ಮೋದಿಯವರು ನಿಮ್ಮೂನ್ ಬ್ರಿಗೇಡ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. ಅಲ್ಲಿನ ಯೋಧರನ್ನು ಮಾತನಾಡಿಸಿ ಮನೋಸ್ಥೈರ್ಯ ತುಂಬಿದ್ದರು. ಕಳೆದ ಜೂನ್ 15ರಂದು ನಡೆದ ಸಂಘರ್ಷದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯೋಧರ ಆರೋಗ್ಯ ವಿಚಾರಿಸಿ ಬಂದಿದ್ದರು. ಈ ಎಲ್ಲಾ ಬೆಳವಣಿಗೆಗಳ ಕುರಿತು ರಾಷ್ಟ್ರಪತಿಗಳ ಜತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.ಒಂದೆಡೆ ಕರೊನಾ ವೈರಸ್‌ ಬಿಕ್ಕಟ್ಟು, ಇನ್ನೊಂದೆಡೆ ಲಡಾಖ್ ಗಡಿಬಿಕ್ಕಟ್ಟು, ಈ ಎಲ್ಲಾ ವಿಷಯಗಳ ಕುರಿತು ಪ್ರಧಾನಿ ಮೋದಿ ಹಾಗೂ ರಾಮನಾಥ್ ಕೋವಿಂದ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮುಂದಿನ ದಿನಗಳಲ್ಲಿ ಒಂದು ವೇಳೆ ಯುದ್ಧ ಪರಿಸ್ಥಿತಿ ಒದಗಿಬಂದರೆ ಭಾರತೀಯ ವಾಯುಪಡೆ ಸರ್ವ ಸನ್ನದ್ಧವಾಗಿದೆ. ಚೀನಾದ ಗಡಿ ವಾಸ್ತವ ರೇಖೆಯ ಬಳಿ ಭಾರತವು ವಾಯು ಕಾರ್ಯಾಚರಣೆಯನ್ನು ನಡೆಸುತ್ತಿದೆ. ಈ ನಿಮಿತ್ತ ಸುಖೊಯ್ ಸು-30 ಎಂಕೆಐ, ಮಿಗ್-29 ಮತ್ತು ಯುದ್ಧ ಹೆಲಿಕಾಪ್ಟರ್ ಗಳಾದ ಅಪಚೆಗಳು ಹಾರಾಟ ಕಾರ್ಯಾಚರಣೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.(ಏಜೆನ್ಸೀಸ್‌)
ವಿಡಿಯೋದಲ್ಲಿ ದಾಖಲಾಯ್ತು ಕೋತಿ ರಹಸ್ಯ… ಮಾಲ್‌ಗಳಲ್ಲಿ ತೆಂಗಿನಕಾಯಿ ಬಹಿಷ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 13 =
Remember me
