ಮಂಡಿ:ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಸಮರ ಇನ್ನೇನು ಶುರುವಾಗಲಿದ್ದು ಪ್ರಧಾನಿ ಮೋದಿ ಪ್ರಚಾರಕ್ಕೆ ಇಳಿದಿದ್ದಾರೆ. ಮಂಡಿ ಪ್ರದೇಶದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಕಾಂಗ್ರೆಸ್​ ದೇಶದ ಸುರಕ್ಷೆ ಮತ್ತು ಅಭಿವೃದ್ಧಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಹಿಮಾಚಲ ಪ್ರದೇಶದಲ್ಲಿ ನಡೆದ ಮೊದಲ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ‘ಕಾಂಗ್ರೆಸ್​ ಸಮಯದಲ್ಲಿ ನಡೆದ ಶಸ್ತ್ರಾಸ್ತ್ರ ವ್ಯಾಪಾರದಲ್ಲಿ ಯಾವಾಗಲೂ ಕಮಿಷನ್​ ಪಡೆಯುತ್ತಿದ್ದರು. ಇದರಿಂದಾಗಿ ಸೇನಾ ಪಡೆಗಳಿಗೆ ಆಯುಧಗಳು ಬೇಕಾದಾಗ ತಲುಪುತ್ತಿರಲಿಲ್ಲ’ ಎಂದು ಆರೋಪಿಸಿದರು.
‘ಸ್ವಾತಂತ್ರ್ಯ ಸಿಕ್ಕಿದ ನಂತರ ಕಾಂಗ್ರೆಸ್​ ನಡೆಸಿದ ಹಗರಣ ಸುರಕ್ಷಾ ಕ್ಷೇತ್ರದಲ್ಲೇ ಆಗಿತ್ತು. ಕಾಂಗ್ರೆಸ್​ ಅಧಿಕಾರದಲ್ಲಿ ಇದ್ದಾಗೆಲ್ಲ ಡಿಫೆನ್ಸ್​ ಡೀಲ್​ಗಳಲ್ಲಿ ಬೇಕಾದಷ್ಟು ಬ್ರೋಕರೇಜ್​ ಪಡೆದುಕೊಂಡಿದೆ’ ಎಂದು ಭಾಷಣದಲ್ಲಿ ವಾಗ್ದಾಳಿ ನಡೆಸಿದರು.
ಹಿಮಾಚಲದಲ್ಲಿ ನವೆಂಬರ್​ ಹನ್ನೆರಡರಿಂದ ಚುನಾವಣೆ ಪ್ರಾರಂಭ ಆಗಲಿದೆ. ಮತ ಎಣಿಕೆ ಡಿಸೆಂಬರ್​ ಎಂಟಕ್ಕೆ ಶುರುವಾಗಲಿದೆ. ಚುನಾವಣೆಗೆ ಇನ್ನೊಂದು ವಾರವೇ ಬಾಕಿ ಇದ್ದು ಹಿಮಾಚಲದಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
