ನವದೆಹಲಿ: ಕರೊನಾ ವೈರಸ್​ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಇಡೀ ದೇಶವನ್ನೇ ಲಾಕ್​​ಡೌನ್ ಮಾಡಲಾಗಿದೆ. ಸದ್ಯ ಅದು ಪಸರಿಸುತ್ತಿರುವ ವೇಗ ತಡೆಯಲು ಸಾಮಾಜಿಕ ಅಂತರವೊಂದೇ ಮಾರ್ಗ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರು ತಾವೂ ಸ್ವತಃ ಅದನ್ನು ಪಾಲಿಸುತ್ತಿದ್ದಾರೆ.
ಸಾಂಕ್ರಾಮಿಕ ರೋಗ ಕರೊನಾ ವೈರಸ್​ ಬಗ್ಗೆ ಚರ್ಚಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ನಿವಾಸದಲ್ಲಿ ಸಚಿವ ಸಂಪುಟದ ಸಭೆ ನಡೆಸಿದ್ದು, ಈ ವೇಳೆ ಭಾಗವಹಿಸಿದ್ದವರೆಲ್ಲ ಪರಸ್ಪರ ಅಂತರ ಕಾಯ್ದುಕೊಂಡಿದ್ದಾರೆ. ಒಂದೇ ಟೇಬಲ್​ನಲ್ಲಿ ಅಕ್ಕಪಕ್ಕ ಕುಳಿತುಕೊಳ್ಳದೆ ಒಬ್ಬರಿಗೊಬ್ಬರು ಅಂತರದಲ್ಲಿ ಕುಳಿತಿರುವ ಫೋಟೋ ವೈರಲ್​ ಆಗಿದೆ.ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರೊನಾ ನಿಯಂತ್ರಣ, ಲಾಕ್​ಡೌನ್​ಗೆ ಸಂಬಂಧಪಟ್ಟ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದುವರದಿಯಾಗಿದೆ.
ಸದ್ಯ ಭಾರತದಲ್ಲಿ 560 ಜನರಿಗೆ ಕರೊನಾ ತಗುಲಿದೆ. ಅವರಲ್ಲಿ 40 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ​ಆಗಿದ್ದಾರೆ. ಪರಿಸ್ಥಿತಿ ಕೈ ಮೀರುವ ಮೊದಲು ಎಚ್ಚೆತ್ತುಕೊಳ್ಳೋಣ ಎಂದು ಮೋದಿಯವರು ಪದೇಪದೆ ಎಚ್ಚರಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸೋಷಿಯಲ್ ಡಿಸ್ಟನ್ಸ್ ನಲ್ಲಿ ಕ್ಯಾಬಿನೆಟ್ ಮೀಟಿಂಗ್​​​ ನಡೆಸಿದ ಫೋಟೋವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಫೇಸ್​​​ಬುಕ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. (ಏಜೆನ್ಸೀಸ್​)
PM@NarendraModiji followed#SocialDistancingin today's Cabinet Meeting. Now it's our turn to cooperate in the lockdown and follow every instruction given by authorities.#IndiaFightsCoronapic.twitter.com/I3QQh9joHH
— Pralhad Joshi (@JoshiPralhad)March 25, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 8 =
Remember me
